ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಜಿರೆಯಿಂದ ಧರ್ಮಸ್ಥಳದವರೆಗೆ ನಡೆದ ಈ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ದೇಗುಲದ ಆಡಳಿತ ಮುಕ್ತೇಸರ ಪಾದಯಾತ್ರೆ ಸಮಿತಿಯ ಗೌರವಾಧ್ಯಕ್ಷ ವಿಜಯ ರಾಘವ ಪಡ್ವೆಟ್ನಾಯ ದೀಪ ಬೆಳಗಿಸುವುದರ ಮುಖಾಂತರ ಪಾದಯಾತ್ರೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಪ್ರತಾಪ್ ಸಿಂಹ ನಾಯಕ್, ಎಸ್.ಡಿ. ಎಮ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಎಸ್ ಪ್ರಭಾಕರ್, ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಧರ್ಮಸ್ಥಳ ಗ್ರಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್. ಎಚ್. ಮಂಜುನಾಥ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಅತ್ಯಂತ ಉತ್ಸಾಹದಿಂದ ಪಾಲ್ಗೊಂಡ ಸದ್‍ಭಕ್ತರಿಗೆ ದಾರಿಯುದ್ದಕ್ಕೂ ಅವಲಕ್ಕಿ, ಐಸ್‍ಕ್ರೀಮ್. ಚಹಾ , ಶರಬತ್ತು, ತಂಪು ಪಾನೀಯಗಳನ್ನು ವಿತರಿಸಲಾಗುತ್ತಿತ್ತು. ನಂತರ ಧರ್ಮಸ್ಥಳದ ಅರ್ಮತವರ್ಷಿಣಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ಪಾದಯಾತ್ರಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ. ಡಿ. ವೀರೆಂದ್ರ ಹೆಗ್ಗಡೆ ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಸಿಗಲೆಂದು ಹಾರೈಸಿದರು.