ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು.
ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ ಭಕ್ತಾದಿಗಳು ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ.
ವಸ್ತುಪ್ರದರ್ಶನದಲ್ಲಿ 195 ಮಳಿಗೆಗಳಿದ್ದು ಬೆಳಿಗ್ಗೆ ಗಂಟೆ 9 ರಿಂದ ರಾತ್ರಿ 10 ರ ವರೆಗೆ ಉಚಿತ ಪ್ರವೇಶಾವಕಾಶವಿದೆ.
ವಸ್ತುಪ್ರದರ್ಶನ ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಭಕ್ತಾದಿಗಳು ನೇತ್ರಾವತಿ ನದಿಯಲ್ಲಿ ಮಿಂದು ಬಹಿರಂಗವಾಗಿ ಶುಚಿರ್ಭೂತರಾದರೆ ಬಳಿಕ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಅಂತರಂಗವಾಗಿ ಶಾಂತಿ, ನೆಮ್ಮದಿ ಪಡೆಯುತ್ತಾರೆ. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆಯುತ್ತಾರೆ.
ರತ್ನಗಿರಿ (ಬಾಹುಬಲಿ ಬೆಟ್ಟ), ಲಲಿತೋದ್ಯಾನ, ಮಂಜೂಷಾ ವಸ್ತು ಸಂಗ್ರಹಾಲಯ, ವಿಂಟೇಜ್ ಕಾರುಗಳ ಮ್ಯೂಸಿಯಂ, ನೆಲ್ಯಾಡಿ ಬೀಡು, ಚಂದ್ರನಾಥ ಸ್ವಾಮಿ ಬಸದಿ, ವಸಂತ ಮಹಲ್, ಮಂಜುನಾಥೇಶ್ವರ ಸಂಸ್ಕøತಿ ಸಂಶೋಧನಾ ಪ್ರತಿಷ್ಠಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳಿಗೂ ಭೇಟಿ ನೀಡುತ್ತಿದ್ದಾರೆ.