22 ರ ಹರೆಯದ ಯುವತಿ ಅಂಜನಾ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಮಂಗಳೂರು : ಅತ್ತಾವರದ ಮನೆಯಲ್ಲಿ ಕೊಲೆಯಾದ ಕಾಲೇಜು ಹುಡುಗಿಯ ಕೊಲೆ ಆರೋಪಿಯನ್ನು ಕೂಡಲೇ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ನಿವಾಸಿ ಸಂದೀಪ್ ರಾಥೋಡ್ ಎಂದು ತಿಳಿದುಬಂದಿದೆ. ಶನಿವಾರ ಬೆಳಗ್ಗೆ ಆತನನ್ನು ಸಿಂದ್ಗಿಯಲ್ಲಿ ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳ ಮೃತದೇಹ ನಗರದ ಪೇಯಿಂಗ್ ಗೆಸ್ಟ್ ನಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದ್ದು, ಪ್ರಕರಣ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಗರದ ಕಾಲೇಜೊಂದರ ವಿದ್ಯಾರ್ಥಿನಿಯಾಗಿರುವ ಅಂಜನಾ ವಶಿಷ್ಟ (22) ಎಂಬಾಕೆಯ ಮೃತದೇಹ ಅತ್ತಾವರ ಮೆಡಿಕಲ್ ಕಾಲೇಜೊಂದರ ಬಳಿಯ ಪೇಯಿಂಗ್ ಗೆಸ್ಟ್ ನಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿತ್ತು. ಕೊಲೆಗಾರನ ಸಿಂದನನ್ನು ಸಿಂಧಗಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಂದೀಪ್ ರಾಥೋಡ್ ಅಂಜನಾಳನ್ನು ಯಾಕಾಗಿ ಕೊಲೆ ಮಾಡಿದ್ದಾನೆ ಎಂದು,ಆತನ ಪೊಲೀಸ್ ವಿಚಾರಣೆಯಲ್ಲಿ ತಿಳಿದು ಬರಲಿದೆ.ಆತನನ್ನು ಬಂಧಿಸಿ ಮಂಗಳೂರಿಗೆ ಕರೆತರುತ್ತಿದ್ದಾರೆ.