28ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ಮ0ಗಳೂರು: ಆಯುರ್ವೇದ ವೈದ್ಯಪದ್ಧತಿಯನ್ನು ಜನಪ್ರಿಯಗೊಳಿಸಿ ಮುಂಚೂಣಿಗೆ ತರುವ ಉದ್ದೇಶದಿಂದ ಭಾರತ ಸರಕಾರದ ಆಯುಷ್ ಮಂತ್ರಾಲಯ ಅಕ್ಟೋಬರ್ 28 ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಆಚರಿಸಲು ದೇಶಾದ್ಯಂತ ಸಿದ್ಧತೆಗಳನ್ನು ನಡೆಸಿದೆ.
ಆ ದಿನ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಆಯುಷ್ ಚಿಕಿತ್ಸಾಲಯ ಆಸ್ಪತ್ರೆ, ಖಾಸಗಿ ಆಯುರ್ವೇದ ಕ್ಲಿನಿಕ್ ಆಸ್ಪತ್ರೆ/ಆಯುರ್ವೇದ ಕಾಲೇಜು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಮಧುಮೇಹ ತಪಾಸಣೆ ಹಾಗೂ ಶಿಬಿರ ನಡೆಯಲಿದೆ. ಆಯುರ್ವೇದ ಕಾಲೇಜುಗಳಲ್ಲಿ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ.
ಅಕ್ಟೋಬರ್ 28 ರಂದು 3ಗಂಟೆಗೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದಿಂದ ವೈದ್ಯರು ವಿದ್ಯಾರ್ಥಿಗಳು, ಸಾರ್ವಜನಿಕರು ಸುಮಾರು 1000 ಮಂದಿಯ ಜಾಥಾ ನಡೆಯಲಿದ್ದು, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಚಾಲನೆ ನೀಡಲಿದ್ದಾರೆ. ಸಂಜೆ 4-30ಕ್ಕೆ ಪುರಭವನದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ ಉದ್ಘಾಟನೆ ಮಾಡಲಿದ್ದಾರೆ. ಸಾರ್ವಜನಿಕ ಉಪನ್ಯಾಸ, ಮಾಹಿತಿ ವಸ್ತು ಪ್ರದರ್ಶನ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.