Home Mangalorean News Kannada News 44.50 ಲಕ್ಷದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ – ಶಾಸಕ ಕಾಮತ್ 

44.50 ಲಕ್ಷದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ – ಶಾಸಕ ಕಾಮತ್ 

Spread the love

44.50 ಲಕ್ಷದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ – ಶಾಸಕ ಕಾಮತ್ 

ಮಂಗಳೂರು: 44.50 ಲಕ್ಷ ವೆಚ್ಚದಲ್ಲಿ ನಡೆಯುವ ವಿವಿಧ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಸ್ಥಳೀಯ ಮುಖಂಡರು ಇಂದು ಗುದ್ದಲಿಪೂಜೆ ನೆರವೇರಿಸಿದರು.

ಈ ಕುರಿತು ಪ್ರತಿಕ್ರಯಿಸಿರುವ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮುಗ್ರೋಡಿ, ಕೊಪ್ಪಲಕಾಡು, ಹೈೂಗೆಬೈಲ್,ಬೈತುರ್ಲಿ, ಮರೋಳಿ ಜಯನಗರ, ಬಂದರ್, ಮಂಗಳಾದೇವಿ ಮುಂತಾದ ಕಡೆಗಳಲ್ಲಿ ಒಟ್ಟು 8 ಕಾಮಗಾರಿಗಳಿಗೆ ಇಂದು ಸ್ಥಳೀಯರ ಮೂಲಕ ಗುದ್ದಲಿಪೂಜೆ ನೆರವೇರಿಸಿದ್ದೇವೆ. ಸುಮಾರು 44.50 ಲಕ್ಷದಲ್ಲಿ ಈ ಕಾಮಗಾರಿಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.

ಮಳೆಯಿಂದ ಹಾನಿಗೀಡಾದ ಕಡೆಗಳಲ್ಲಿ ಆಗಬೇಕಿರುವ ಕಾಮಗಾರಿಗಳ ಕುರಿತು ಸಾರ್ವಜನಿಕರು ನನ್ನಲ್ಲಿ ಮನವಿ ಸಲ್ಲಿಸಿದ್ದರು. ಅದರಂತೆ ಇಂದು 8 ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿದೆ. ಶೀಘ್ರವೇ ಈ ಕಾಮಗಾರಿಗಳು ಪ್ರಾರಂಭವಾಗಲಿದ್ದು, ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರ ಸಹಕಾರ ಬೇಕಿದೆ. ಸ್ಥಳೀಯ ನಿವಾಸಿಗಳ ಬೇಡಿಕೆಯಂತೆ ಅಗತ್ಯವಿರುವ ಕಾಮಗಾರಿಗಳನ್ನು ಈಗಾಗಲೇ ಗುರುತಿಸಿದ್ದು ಮುಂದಿನ ದಿನಗಳಲ್ಲಿ ಅನುದಾನ ಜೋಡಿಸಿ ಜನರ ಅಪೇಕ್ಷೆಯ ಎಲ್ಲಾ ಕಾಮಗಾರಿಗಳನ್ನು ಮಾಡಿಕೊಡುತ್ತೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.


Spread the love

Exit mobile version