Home Mangalorean News Kannada News ವಿಜಯೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ; ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ವಿಜಯೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ; ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

Spread the love

ವಿಜಯೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ; ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ಪದವಿನಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ ಮೆರವಣಿಗೆ ವೇಳೆ ಕೆಲವು ದುಷ್ಕರ್ಮಿಗಳು ಮನೆ ಮತ್ತು ಮಂದಿರವೊಂದಕ್ಕೆ ಕಲ್ಲು ತೂರಾಟ ನಡೆಸಿದ್ದು ಈ ವೇಳೆ ಬಿಜೆಪಿ ಕಾರ್ಯಕರ್ತರು ಗಾಯಗೊಂಡ  ಘಟನೆ ಮಂಗಳವಾರ ಸಂಜೆ ನಡೆದಿದೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಅವರ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಮೆರವಣಿಗೆ ಆಯೋಜಿಸಿದ್ದರು.  ಮೆರವಣಿಗೆ ಅಡ್ಯಾರ್‌ಪದವಿನಿಂದ ಮುಂದೆ ಸಾಗುತ್ತಿದ್ದಂತೆ ಕೆಲವು ದುಷ್ಕರ್ಮಿಗಳು ಮಸೀದಿ ಬಳಿಯಿಂದ ಮನೆ, ಶ್ರೀ ರಾಮಾಂಜನೇಯ ಮಂದಿರ ಮತ್ತು ವ್ಯಾಯಾಮ ಶಾಲೆಗೆ ಕಲ್ಲು ತೂರಾಟ ನಡೆಸಿದ್ದು, ಮನೆ ಮಂದಿರಕ್ಕೆ ಹಾನಿಯಾಗಿದೆ. ಇದು ಮಾತ್ರವಲ್ಲದೆ ಅಲ್ಲೇ ಇದ್ದ ಬೈಕ್, ಕಾರಿನ ಮೇಲೂ ದಾಳಿ ಮಾಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ವನಜಾಕ್ಷಿ, ಲೋಕೇಶ್, ದೇವಿಪ್ರಸಾದ್, ಅರುಣ್, ಅಭಿಜಿತ್, ಅಶೋಕ್ ಮತ್ತು ಸಫ್ವಾನ್ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ನಗರ ಕಮೀಷನರ್ ವಿಪುಲ್ ಕುಮಾರ್ ಭೇಟಿ ನೀಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ನೀಡಿದ್ದಾರೆ.

ಘಟನೆಯಿಂದ ಸ್ಥಳದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಸ್ಥಳಕ್ಕೆ ಕೆಎಸ್‌ಆರ್‌ಪಿ, ಆರ್‌ಎಎಫ್ ಮತ್ತು ಪೊಲೀಸ್ ತಂಡ ತೆರಳಿದ್ದು, ಬಿಗುಬಂದೋಬಸ್ತ್ ಮಾಡಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version