6ನೇ ತರಗತಿಗೆ ದಾಖಲಿಸಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Spread the love

6ನೇ ತರಗತಿಗೆ ದಾಖಲಿಸಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮಂಗಳೂರು: ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೇ. 21 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿಷ್ಟಿತ ಶಾಲಾ ವಿವರ:
ಮಂಗಳೂರಿನ ಕೊಡಿಯಾಲ್‍ಬೈಲ್ ನಲ್ಲಿರುವ ಶಾರದಾ ವಿದ್ಯಾಲಯ, ಬಂಟ್ವಾಳ ತಾಲೂಕಿನ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರ, ಮಾಣಿಯಲ್ಲಿರುವ ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ವಿಟ್ಲದ ಜೆಸಿಸ್ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿಯಲ್ಲಿರುವ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಹಳೆಕೋಟೆಯಲ್ಲಿರುವ ವಾಣಿ ಇಂಗ್ಲೀಷ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಡಂತ್ಯಾರುವಿನ ಸೆಕ್ರೇಡ್ ಹಾಟ್ಸ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗಗಳು.

ಅರ್ಹತೆ ಹಾಗೂ ಷರತ್ತುಗಳು:
ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. (ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು), ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷಗಳಿಗೆ ಮೀರಿರಬಾರದು. (2023-24ನೇ ಸಾಲಿನ ಆದಾಯ ಪ್ರಮಾಣ ಪತ್ರ ಲಗತ್ತೀಕರಿಸಬೇಕು), ಜನನ ಪ್ರಮಾಣ ಪತ್ರವನ್ನು ಲಗತ್ತಿಸಿರಬೇಕು. 2 ಪಾಸ್‍ಪೋರ್ಟ್ ಸೈಜ್ ಭಾವಚಿತ್ರ, ಪ್ರತಿಭಾವಂತ ವಿದ್ಯಾರ್ಥಿಯಾಗಿರಬೇಕು. ವಿದ್ಯಾರ್ಥಿಯು 5ನೇ ತರಗತಿಯಲ್ಲಿ ಶೇ. 60% ಅಂಕ ಪಡೆದಿರಬೇಕು.
ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯನ್ನು ಹಾಗೂ ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ) ಲಗ್ತೀಕರಿಸುವುದು, ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಬಹುದು. ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ ಅಂದರೆ, ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿಗೆ ಅವಕಾಶ ಕಲ್ಪಿಸಲಾಗುವುದು. ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೆ ಅವಕಾಶ ನೀಡುವುದು. ಗರಿಷ್ಠ ರೂ. 75,000/- ಶಾಲಾ ಶುಲ್ಕವನ್ನು ಸರಕಾರದಿಂದ ಭರಿಸಲಾಗುವುದು. (ಶಾಲೆಯ ಕಡ್ಡಾಯ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರ ಭತ್ಯೆಗಳನ್ನು ಒಳಗೊಂಡಿರುತ್ತದೆ), ವಿದ್ಯಾರ್ಥಿಯ ಬ್ಯಾಂಕ್ ಪಾಸ್‍ಪುಸ್ತಕದ ಜೆರಾಕ್ಸ್ ಪ್ರತಿ. ಅಪೂರ್ಣ ಅರ್ಜಿ, ತಡವಾಗಿ ಬಂದ ಅರ್ಜಿ ಹಾಗೂ ನಿಬಂಧನೆಗಳನ್ನು ಪೂರೈಸದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಕಚೇರಿ, ಅಶೋಕನಗರ ಅಂಚೆ, ಮಂಗಳೂರು-575006 ದೂ.ಸಂಖ್ಯೆ: 0824-2451269 ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love