6 ಕೊರೋನಾ ಪ್ರಕರಣ ದೃಢ ಹಿನ್ನಲೆ – ಕಾಸರಗೋಡು-ಮಂಗಳೂರು ನಡುವೆ ವಾಹನ ಸಂಚಾರ ನಿಷೇಧ
ಮಂಗಳೂರು : ಕೊರೋನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21ರ ಮಧ್ಯಾಹ್ನ 2ರಿಂದ ಮಾ.31ರ ಮಧ್ಯರಾತ್ರಿ 12ರವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಈಗಾಗಲೇ 6 ಕೊರೋನಾ ಪ್ರಕರಣಗಳು ವೈದ್ಯಕೀಯ ತಪಾಸಣೆಯಿಂದ ವರದಿಯಾಗಿದ್ದು, ಕಾಸರಗೋಡು ಮತ್ತು ಮಂಗಳೂರು ನಡುವೆ ಹೆಚ್ಚಿನ ಪ್ರಯಾಣಿಕರು ತಮ್ಮ ದೈನಂದಿನ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ – ಕೇರಳ ರಾಜ್ಯದ ಕಾಸರಗೋಡು ಗಡಿ ಭಾಗದಲ್ಲಿ ಸಂಚರಿಸುವ ಎಲ್ಲಾರೀತಿಯ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಮಧ್ಯೆ ತುರ್ತು ಸಂದರ್ಭ ತಲಪಾಡಿ ಚೆಕ್ಪೋಸ್ಟ್ ಮೂಲಕ ಮಾತ್ರ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.