ಅ. 31 : ತೊಟ್ಟಂ ಚರ್ಚಿನಲ್ಲಿ ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಕಾರ್ಯಾಗಾರ

Spread the love

ಅ. 31 : ತೊಟ್ಟಂ ಚರ್ಚಿನಲ್ಲಿ ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಕಾರ್ಯಾಗಾರ

ಉಡುಪಿ: ಧರ್ಮಪ್ರಾಂತ್ಯದ ಯುವ ಕಥೊಲಿಕ ವಿದ್ಯಾರ್ಥಿ ಸಂಚಾಲನ ಹಾಗೂ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ವೈಸಿಎಸ್ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಕಾರ್ಯಾಗಾರವನ್ನು ಅಕ್ಟೋಬರ್ 31 ರಂದು ಬೆಳಿಗ್ಗೆ 9 ರಿಂದ ಸಂಜೆ 4.30 ರ ತನಕ ಚರ್ಚಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಾಗಾರದ ಉದ್ಘಾಟನೆಯನ್ನು ಕೊಂಕಣ್ ಮೈನಾ ಬಿರುದಾಂಕಿತರಾದ ಹೆಸರಾಂತ ಗಾಯಕ ದಿ. ವಿಲ್ಫೀ ರೆಬಿಂಬಸ್ ಅವರ ಪತ್ನಿ ಮೀನಾ ರೆಬಿಂಬಸ್ ಮಾಡಲಿದ್ದು ತೊಟ್ಟಂ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ಅಧ್ಯಕ್ಷತೆ ವಹಿಸಿಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಭಾಗವಹಿಸಲಿದ್ದಾರೆ.

ಯುವ ವಿದ್ಯಾರ್ಥಿಗಳಿಗೆ ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಪಡೆಯಲು ಇರುವ ಒಂದು ಅತ್ಯುತ್ತಮ ಅವಕಾಶವಾಗಿದ್ದು ಧರ್ಮಪ್ರಾಂತ್ಯದ ಯುವಜನರು ಇದರ ಪ್ರಯೋಜನ ಪಡೆಯುವಂತೆ ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.


Spread the love