ಅನಿಲ ಟ್ಯಾಂಕರ್‌ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

Spread the love

ಅನಿಲ ಟ್ಯಾಂಕರ್‌ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಮಂಗಳೂರು: ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದೆ. ಘಟನಾ ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹಾಕಿದ್ದಾರೆ ಸ್ಥಳಕ್ಕೆ ಎಂಆರ್‌ಪಿಎಲ್ ತಂಡ ಮತ್ತು ಅಗ್ನಿ ಶಾಮಕ ದಳದವರು ಕೂಡ ದೌಡಾಯಿಸಿದ್ದಾರೆ.

ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆಯಾಗುತ್ತಿರುವ ಟ್ಯಾಂಕ್ ಅನ್ನು ಎಂಆರ್‌ಪಿಎಲ್ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಲಾಗಿದ್ದು, ಎಂಸಿಲ್ ಹಾಕಿ ಮುಚ್ಚಿದರು, ಅನಿಲ ಸೋರಿಕೆಯಾಗುತ್ತಿದೆ. ಕಾರವಾರದಿಂದ ಕೊಚ್ಚಿಗೆ ಹೈಡ್ರಾಲಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆಯಾಗಿದೆ. ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಕೂಡಲೇ ಚಾಲಕ ಹೆದ್ದಾರಿ ಬಳಿ ಟ್ಯಾಂಕರ್ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ.

ಅನಿಲ ಸೋರಿಕೆಯಿಂದ ಸ್ಥಳೀಯ ನಿವಾಸಿಗಳಲ್ಲಿ ಉಸಿರಾಟದ ತೊಂದರೆಯುಂಟಾಗುವ ಸಾಧ್ಯತೆಯಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ, ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನಸವಾರರಿಗೆ ನೀಡಿಲ್ಲ ಎಂದು ತಿಳಿದುಬಂದಿದೆ.


Spread the love
Subscribe
Notify of

0 Comments
Inline Feedbacks
View all comments