ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್ ಎಫೆಕ್ಟ್ ಕರ್ನಾಟಕ, ಕೇರಳದಲ್ಲಿ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ

Spread the love

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್ ಎಫೆಕ್ಟ್ ಕರ್ನಾಟಕ, ಕೇರಳದಲ್ಲಿ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ

ಮಂಗಳೂರು: ಕರ್ನಾಟಕ ಮತ್ತು ಗೋವಾ ಕರಾವಳಿಯ ಸಮೀಪ ಮಧ್ಯ ಪೂರ್ವ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಉಂಟಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅತ್ತ ಪೂರ್ವದಲ್ಲಿ ಬಂಗಾಳಕೊಲ್ಲಿಯ ನೈಋತ್ಯ ಕರಾವಳಿಯ ತಮಿಳುನಾಡು ಕರಾವಳಿಯ ಬಳಿ ಸೈಕ್ಲೋನಿಕ್ ಪರಿಚಲನೆ ರೂಪುಗೊಳ್ಳುತ್ತಿದೆ.

ಇನ್ನೊಂದೆಡೆ ಈಶಾನ್ಯ ಅಸ್ಸಾಂ ಬಳಿಯೂ ಕರ್ನಾಟಕ, ಗೋವಾ ಕರಾವಳಿಯಲ್ಲಿ ಚಂಡಮಾರುತ ಮಾದರಿ ಕಾಣಿಸಿಕೊಂಡಿದ್ದು ಇದರ ಪರಿಣಾಮವಾಗಿ ದಕ್ಷಿಣ ಗುಜರಾತ್, ಮಹಾರಾಷ್ಟ್ರ, ಉತ್ತರ ಮತ್ತು ಒಳ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಈಶಾನ್ಯ ರಾಜ್ಯಗಳಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಈ ರಾಜ್ಯಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈಶಾನ್ಯ ಭಾರತದ ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ಕೂಡ ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಅದೇ ಸಮಯದಲ್ಲಿ ಕೊಂಕಣ ಮತ್ತು ಗೋವಾ ಪ್ರದೇಶಗಳಲ್ಲಿ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.


Spread the love