ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೆಂಥಿಲ್ ಸೂಚನೆ 

Spread the love

ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೆಂಥಿಲ್ ಸೂಚನೆ 

ಮಂಗಳೂರು: ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖಾ ವತಿಯಿಂದ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲು ಸರ್ವ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ಜರುಗಿದ ಟಿಪ್ಪು ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನವೆಂಬರ್ 10 ರಂದು ಪೂರ್ವಾಹ್ನ10.30 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಉಪನ್ಯಾಸಕರ ಆಯ್ಕೆ ವೇದಿಕೆ, ವೇದಿಕೆ ಅಲಂಕಾರಕ್ಕೆ ಸೂಚನೆಯನ್ನು ನೀಡಲಾಯಿತು.

ಆಚರಣೆಯಲ್ಲಿ ಉಪನ್ಯಾಸಗಳು ಕೇಳುಗರಲ್ಲಿ ಜ್ಞಾನ ವೃದ್ಧಿಸುವಂತದುದಾಗಿರಬೇಕು ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ, ಪೊಲೀಸ್ ಕಮಿಷನರ್ ಸುರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇ ಗೌಡ, ಅಪರ ಜಿಲ್ಲಾಧಿಕಾರಿ ಕುಮಾರ್, ಮೂಡಾ ಕಮಿಷನರ್ ಶ್ರೀಕಾಂತ್ ರಾವ್ ಕೆ., ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ರಾಜೇಶ್ ಬಿ., ಸಮುದಾಯದ ಗಣ್ಯರು, ವಿವಿಧ ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love