Spread the love
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವಿದೇಶಿ ವ್ಯಾಸಾಂಗಕ್ಕೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಜಿ ವ್ಯಾಸಂಗ ಮಾಡಲು ಹಣಕಾಸಿನ ನೆರವು (ವಿದ್ಯಾರ್ಥಿವೇತನ ರೂಪದಲ್ಲಿ) ನೀಡಲು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ವೆಬ್ಸೈಟ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವೆಬ್ಸೈಟ್ https://dom.karnataka.gov.in ಅಥವಾ ಸಹಾಯವಾಣಿ ಸಂಖ್ಯೆ : 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love