Spread the love
ಆಗಸ್ಟ್ 23 ರಿಂದ ಸಪ್ಟೆಂಬರ್ 1 ರವರೆಗೆ ಮೊಸರು ಕುಡಿಕೆ ನಡೆಯುವ ಕಡೆಗಳಲ್ಲಿ ಮದ್ಯದಂಗಡಿ ಬಂದ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 23 ರಿಂದ ಸಪ್ಟೆಂಬರ್ 1 ರವರೆಗೆ ವಿವಿಧ ಕಡೆಗಳಲ್ಲಿ ಮೊಸರು ಕುಡಿಕೆ ಮೆರವಣಿಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದು, ಈ ಸಮಯ ಅಮಲು ಪದಾರ್ಥ ಸೇವಿಸಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್ಶಾಪ್/ಬಾರ್ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
Spread the love