ಆನ್ ಲೈನ್ ಟ್ರೇಡಿಂಗ್ ವಂಚನೆ – ಇಬ್ಬರ ಬಂಧನ, ರೂ. 13.95 ಲಕ್ಷ ನಗದು ವಶ

Spread the love

ಆನ್ ಲೈನ್ ಟ್ರೇಡಿಂಗ್ ವಂಚನೆ – ಇಬ್ಬರ ಬಂಧನ, ರೂ. 13.95 ಲಕ್ಷ ನಗದು ವಶ

ಉಡುಪಿ: ಆನ್ ಲೈನ್ ಟ್ರೇಡಿಂಗ್ ಮೂಲಕ ವಂಚನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಬಂಧಿಸಿ ರೂ 13.95 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಗುಜರಾತ್ ರಾಜ್ಯದ ಸೂರತ್ ನಿವಾಸಿ ನವಾದಿಯಾ ಮುಖೇಶ್ ಭಾಯಿ ಗಣೇಶ್ಭಾಯಿ(44) ಮತ್ತು ರಾಜ್ ಕೋಟ್ ನಿವಾಸಿ ಧರಮ್ಜೀತ್ ಕಮಲೇಶ್ ಚೌಹಾನ್ (28) ಎಂದು ಗುರುತಿಸಲಾಗಿದೆ.

ಜುಲೈ 29 ರಂದು ಮೊಬೈಲ್ ನಂಬ್ರ +919232037584 ರಿಂದ ಯಾರೋ ಅಪರಿಚಿತರು ಕರೆಮಾಡಿ ಕಸ್ಟಮ್ಸ್ನಿಂದ ಕರೆಮಾಡುತ್ತಿರುವುದಾಗಿ ತಿಳಿಸಿ ನಿಮ್ಮ ಆಧಾರ್ ನಂಬ್ರ ಬಳಸಿ ಬುಕ್ ಆಗಿರುವ FedEx ಕೋರಿಯರ್ನಲ್ಲಿ 5 ಪಾಸ್ಪೋರ್ಟ್, 5 ಎ.ಟಿ.ಎಮ್ ಕಾರ್ಡ್, 200 ಗ್ರಾಂ ಎಂ.ಡಿ.ಎಮ್.ಎ ಹಾಗೂ 5000 USD ಇದ್ದು ಸದ್ರಿ ಕೋರಿಯರ್ ಪ್ರಸ್ತುತ ಮುಂಬಯಿ ಕಸ್ಟಮ್ಸ್ರವರ ವಶದಲ್ಲಿ ಇರುವುದಾಗಿ ತಿಳಿಸಿರುತ್ತಾರೆ.

ಮಾಹಿತಿದಾರರು ಸದರಿ ಕೋರಿಯರ್ ತಾನು ಮಾಡಿಲ್ಲವಾಗಿ ತಿಳಿಸಿದಾಗ ಅಪರಿಚಿತ ವ್ಯಕ್ತಿ ಆತನ ಮೇಲಾಧಿಕಾರಿಯವರಿಗೆ ಹಾಟ್ಲೈನ್ ಮುಖೇನಾ ಸಂಪರ್ಕ ಕಲ್ಪಿಸಿಕೊಟ್ಟಿದ್ದು, ಸದ್ರಿ ಹಾಟ್ಲೈನ್ನಲ್ಲಿ ಪೊಲೀಸ್ ಅಧಿಕಾರಿ ಎಂದು ನಂಬಿಸಿ ಪಿರ್ಯಾದಿದಾರರಿಗೆ ನಿಮ್ಮ ಆಧಾರ್ ಕಾರ್ಡ್ನ ದುರ್ಬಳಕೆಯ ಬಗ್ಗೆ ದೂರನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿ ನಮ್ಮ ಕೇಂದ್ರ ಕಚೇರಿಗೆ ಕರೆಯನ್ನು ಫಾರ್ವಡ್ ಮಾಡುವುದಾಗಿ ತಿಳಿಸಿ ನಂತರದಲ್ಲಿ ಕರೆ ಸ್ವೀಕರಿಸಿದ ವ್ಯಕ್ತಿ ನಿಮ್ಮ ಆಧಾರ್ ಕಾರ್ಡ್ ವಿವಿಧ ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿದ್ದು ಹಾಗೂ ಭಯೋತ್ಪಾದಕರು ಸಿಮ್ ಖರೀದಿಸಲು ಬಳಸಿರುವುದಾಗಿ ತಿಳಿಸಿರುತ್ತಾರೆ.

ಈ ದೂರಿಗೆ ಸಂಬಂಧಿಸಿ ನಿಮ್ಮನ್ನು ವರ್ಚುವಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದು Skype App ಮೂಲಕ ವಿಡಿಯೋ ಮಾನಿಟರಿಂಗ್ ಮಾಡುವುದಾಗಿ ತಿಳಿಸಿದ್ದು, ಅದರಂತೆ ಮಾಹಿತಿದಾರರನ್ನು ಜುಲೈ 29 ರಿಂದ ಆಗಸ್ಟ್ 9 ರ ತನಕ ಅವರ ಮನೆಯ ರೂಮ್ ಒಂದರಲ್ಲಿ ಇರುವಂತೆ ಹಾಗೂ ಬೇರೆ ಯಾರೊಂದಿಗೂ ಸಂಪರ್ಕಿಸದಂತೆ ಸೂಚಿಸಿರುತ್ತಾರೆ.

ನಂತರದಲ್ಲಿ ಸದ್ರಿ ಪ್ರಕರಣವನ್ನು ಸರಿಪಡಿಸಲು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸುವಂತೆ ತಿಳಿಸಿದ್ದು, ಅದರಂತೆ ಪಿರ್ಯಾದಿದಾರರು ತನ್ನ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಉಳಿತಾಯ ಖಾತೆಯಿಂದ ಆಗಸ್ಟ್ 6 ರಿಂದ 9 ರ ತನಕ ಹಂತ ಹಂತವಾಗಿ ಒಟ್ಟು ರೂಪಾಯಿ 1,33,81,000/- ಹಣವನ್ನು ವರ್ಗಾಯಿಸಿರುತ್ತಾರೆ.

ಈ ಬಗ್ಗೆ ಅರುಣ್ ಕುಮಾರ್ ಗೋವಿಂದ ಕರ್ನವರ್ ರವರು ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 61/2024 ಕಲಂ: 66(C) 66(D) ಐ.ಟಿ. ಕಾಯ್ದೆ ಮತ್ತು ಕಲಂ 318(4) BNS ಯಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಬಗ್ಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ರವರ ನೇತೃತ್ವದಲ್ಲಿ ಸೆನ್ ಪೊಲೀಸ್ ಠಾಣಾ ಪಿ.ಎಸ್.ಐ, ಅಶೋಕ್ ಸಿಬ್ಬಂದಿಗಳಾದ ಪ್ರವೀಣ ಶೆಟ್ಟಿಗಾರ್, ರಾಜೇಶ್, ಅರುಣ ಕುಮಾರ್, ಯತೀನ್ ಕುಮಾರ್, ರಾಘುವೇಂದ್ರ ಕಾರ್ಕಡ, ದಿಕ್ಷೀತ್, ಪ್ರಶಾಂತ್ , ಮುತ್ತೆಪ್ಪ ಆಡೀನ್, ಮಾಯಪ್ಪ ಗಡದೆ, ಪರಶುರಾಮ ಮತ್ತು ಸುದೀಫ್ ರವರನ್ನೊಳಗೊಂಡ ವಿಶೇಷ ತಂಡವು ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ 5 ಮೊಬೈಲ್ ಪೋನ್ ಗಳನ್ನು ಹಾಗೂ ಆರೋಪಿಗಳಿಂದ ರೂ, 13,95,000/- ನಗದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.


Spread the love
Subscribe
Notify of

0 Comments
Inline Feedbacks
View all comments