ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ಮನೆ ದರೋಡೆ ಪ್ರಕರಣ: ಇನ್ನೋರ್ವ ಆರೋಪಿ ಪೊಲೀಸ್ ವಶಕ್ಕೆ

Spread the love

ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ಮನೆ ದರೋಡೆ ಪ್ರಕರಣ: ಇನ್ನೋರ್ವ ಆರೋಪಿ ಪೊಲೀಸ್ ವಶಕ್ಕೆ

ವಿಟ್ಲ: ಕೊಳ್ನಾಡು ಗ್ರಾಮದ ನಾರ್ಶದಲ್ಲಿ ಉದ್ಯಮಿ ನಾರ್ಶ ಸುಲೈಮಾನ್ ಹಾಜಿಯವರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ಕೇರಳ ಮೂಲದ ಸಚಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರಿನ ನಾರ್ಶ ಎಂಬಲ್ಲಿ ಜ.3 ರಂದು ಸಿಂಗಾರಿ ಬೀಡಿಯ ಮಾಲಕ ಸುಲೈಮಾನ್ ಹಾಜಿಯವರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದ ಕಳ್ಳರು ಲಕ್ಷಾಂತರ ರೂ. ದರೋಡೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕೇರಳದ ಕೊಟ್ಟಾಯಂ ನಿವಾಸಿ ಅನಿಲ್ ಫೆರ್ನಾಂಡಿಸ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಇನ್ನೋರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸುತ್ತಿದ್ದಂತೆ ಆರೋಪಿಯ ಆರೋಗ್ಯದಲ್ಲಿ ಏರುಪೇರಾದ ಕಾರಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಧಿತ ಆರೋಪಿ ಅಪಸ್ಮಾರ ಮತ್ತು ತಲೆನೋವು ಸಮಸ್ಯೆಯಿಂದ ಬಳಲುತ್ತಿದ್ದು, ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿಗೆ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದಾರೆ.

ಜನವರಿ 3ರಂದು ರಾತ್ರಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಮನೆಗೆ ಇಡಿ ಅಧಿಕಾರಿಗಳ ಹೆಸರಲ್ಲಿ ದಾಳಿ ಮಾಡಿ ದರೋಡೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇರಳದ ಕೊಟ್ಟಾಯಂ ನಿವಾಸಿ ಅನಿಲ್ ಫೆರ್ನಾಂಡಿಸ್ ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments