Spread the love
ಉಡುಪಿ: ಕೊರೋನಾ ಸೋಂಕಿಗೆ ಬೈಂದೂರಿನ 63 ವರ್ಷದ ವ್ಯಕ್ತಿ ಸಾವು
ಉಡುಪಿ: ಕೊರೋನಾ ಸೋಂಕಿಗೆ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಕ್ಷಯರೋಗದಿಂದ ಬಳಲುತ್ತಿದ್ದ ಬೈಂದೂರಿನ 63 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಬೈಂದೂರಿನ 63 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಕ್ಷಯರೋಗದಿಂದ ಬಳಲುತ್ತಿದ್ದು ವಾರದ ಹಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಿಗೆ ಆ ವೇಳೆ ಕೊರೋನಾ ಸೋಂಕು ದೃಢಪಟ್ಟಿತ್ತು. ಬಳಿಕ ಆರೋಗ್ಯ ಸ್ಥಿತಿ ಗಂಭೀರವಾಗಿದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಕಳೆದ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಮೃತ ವ್ಯಕ್ತಿಯ ಅಂತ್ಯಸಂಸ್ಕಾರವು ಕೋವಿಡ್ ನಿಯಮಾವಳಿಯಂತೆ ಬೈಂದೂರಿನಲ್ಲಿ ನಡೆಯಲಿದೆ.
Spread the love