ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧೀಯವರ 35ನೇ ಪುಣ್ಯತಿಥಿ
ಉಡುಪಿ: ಭಾರತದ ಮಾಜಿ ಪ್ರಧಾನಿ ,ದಿವಂಗತ ಶ್ರೀಮತಿ ಇಂದಿರಾಗಾಂಧೀಯವರ 35ನೇ ಪುಣ್ಯತಿಥಿಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಗುರುವಾರ ಆಚರಿಸಲಾಯಿತು.
ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಇಂದಿರಾ ಗಾಂಧೀ ಯವರ ಭಾವಚಿತ್ರಕ್ಕೆ ಜ್ಯೋತಿಯನ್ನು ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಉಳುವವನೇ ಹೊಲದೊಡೆಯ,ಬ್ಯಾಂಕ್ ರಾಷ್ಟ್ರೀಕರಣ ದಂತಹ ಕ್ರಾಂತಿಕಾರಕ ಯೋಜನೆಗಳ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ಛಾಪನ್ನು ಮೂಡಿಸಿರುವ ದಿ.ಇಂದಿರಾಗಾಂಧೀಯವರ ಧೈರ್ಯ,ಸ್ಥೈರ್ಯ,ಬಡವರ ಬಗ್ಗೆ ಅವರಿಗಿದ್ದ ಕಾಳಜಿ,ಇವುಗಳೆಲ್ಲವೂ ಇಂದಿನ ಪೀಳಿಗೆಗೆ ಮಾದರಿಯಾಗಿವೆ.” ಎಂದರು.
ಮಾಜಿ ಶಾಸಕರಾದ ಯು.ಆರ್ ಸಭಾಪತಿಯವರು ಮಾತನಾಡುತ್ತಾ,ಇಂದಿರಾಜಿಯವರೊಂದಿಗಿನ ತಮ್ಮ ಭೇಟಿಯ ಸವಿನೆನಪುಗಳನ್ನು ಮೆಲುಕು ಹಾಕಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಮಾತನಾಡಿದರು.ಜಿಲ್ಲಾ ಮಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಗೀತಾ ವಾಗ್ಳೆ ಯವರು ಪ್ರಸ್ತಾವನೆ ಸಲ್ಲಿಸಿ ನಿರೂಪಿಸಿದರು.
ಡಾ.ಸುನೀತಾ ಶೆಟ್ಟಿ ವೆರೋನಿಕಾ ಕರ್ನೇಲಿಯೋ, ನಾಗೇಶ್ ಉದ್ಯಾವರ, ಮಹಾಬಲ ಕುಂದರ್, ಇಸ್ಮಾಯಿಲ್,ಆತ್ರಾಡಿ, ಭಾಸ್ಕರ್ ರಾವ್ ಕಿದಿಯೂರು, ಮೀನಾಕ್ಷಿ ಮಾಧವ ಬನ್ನಂಜೆ, ಜ್ಯೋತಿ ಹೆಬ್ಬಾರ್, ಸುಲೋಚನಾ ದಾಮೋದರ್, ದೋರತಿ ಟೀಚರ್, ರೋಶನೀ ವಲಿವರ್, ಜಿತೇಶ್, ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.