ಉಡುಪಿ: ಮೇ 21ರಂದು ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Spread the love

ಉಡುಪಿ: ಮೇ 21ರಂದು ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಮೇ 21ರಂದು ಮಂಗಳವಾರ ಬೆಳಗ್ಗೆ 10ಗಂಟೆಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಾಗಾರವನ್ನು ವಿಶೇಷ ಪೊಕ್ಸೋ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಉದ್ಘಾಟಿಸಲಿದ್ದು, ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಿಚಾರ ಮಂಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಶರ್ಮಿಳಾ ಎಸ್. ಭಾಗವಹಿಸಲಿದ್ದಾರೆ.

ಈ ಕಾರ್ಯಾಗಾರದಲ್ಲಿ ಮಾಧ್ಯಮದವರು ಪೋಕ್ಸೊ ಪ್ರಕರಣದ ಬಗ್ಗೆ ಯಾವ ರೀತಿ ವರದಿ ಮಾಡಬೇಕು ಎಂಬುದರ ಕುರಿತು ಮಾಹಿತಿ ನೀಡಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯರು ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆಯಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ತಿಳಿಸಿದ್ದಾರೆ


Spread the love