ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಕೋವಿಡ್ – 19 ಸೋಂಕಿತರ ಫೋಟೊ ವೈರಲ್ – ಪ್ರಕರಣ ದಾಖಲು
ಉಡುಪಿ: COVID-19 ಶಂಕಿತ ಹಾಗೂ ಸೋಂಕಿತ ವ್ಯಕ್ತಿಗಳ ಹೆಸರು ಅಥವಾ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸರಿಸಿ / ಫಾರ್‌ವರ್ಡ್ ಮಾಡಿ, ಸರ್ಕಾರದ ಆದೇಶ ಉಲ್ಲಂಘಿಸಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಡಾ/ ಸುಧೀರ್ ಚಂದ್ರ ಸೂಡಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇವರು ನೀಡಿದ ದೂರಿನ ಅನ್ವಯ ಉಡುಪಿ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಜಿಲ್ಲಾ ಪೊಲೀಸ್ ಇಲಾಖೆ COVID-19 ಪ್ರಕರಣಕ್ಕೆ ಸಂಬಂಧಿಸಿ, ಸೋಂಕಿತ ವ್ಯಕ್ತಿಯ ಮಾಹಿತಿಯನ್ನು ಮತ್ತು ಆತನ ಕುಟುಂಬ ಸದಸ್ಯರ ಫೋಟೋವನ್ನು ಅವರ ಅನುಮತಿ ಇಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಪ್ರಸರಿಸಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಡಾ/ ಸುಧೀರ್ ಚಂದ್ರ ಸೂಡಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇವರು ನೀಡಿದ ದೂರಿನ ಅನ್ವಯ ಉಡುಪಿ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿ, ತನಿಖೆಯಲ್ಲಿರುತ್ತದೆ.
ಆದುದರಿಂದ ಯಾವುದೇ ವ್ಯಕ್ತಿ ವಾಟ್ಸ್ ಅಪ್, ಫೇಸ್ ಬುಕ್ ಹಾಗೂ ಇತರೇ ಯಾವುದೇ ಸಾಮಾಜಿಕ ಜಾಲತಾಣದಲ್ಲಿ COVID-19 ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಅಥವಾ ಸೋಂಕಿತ ವ್ಯಕ್ತಿಗಳ ಮಾಹಿತಿಯನ್ನು ಅಥವಾ ಫೋಟೋವನ್ನು ಅಥವಾ ಸುಳ್ಳು ಮಾಹಿತಿಗಳನ್ನು ಪ್ರಸರಿಸದಂತೆ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಈ ಪ್ರಕಟಣೆಯನ್ನು ನೀಡಿದೆ.