ಉಡುಪಿಯಲ್ಲಿ ವಕ್ಫ್ ಬೋರ್ಡ್ ನೊಟೀಸ್, ಪಹಣಿ ತಿದ್ದುಪಡಿ ಗಮನಕ್ಕೆ ಬಂದರೆ ತಕ್ಷಣ ಮಾಹಿತಿ ನೀಡಿ : ಯಶ್ಪಾಲ್ ಸುವರ್ಣ

Spread the love

ಉಡುಪಿಯಲ್ಲಿ ವಕ್ಫ್ ಬೋರ್ಡ್ ನೊಟೀಸ್, ಪಹಣಿ ತಿದ್ದುಪಡಿ ಗಮನಕ್ಕೆ ಬಂದರೆ ತಕ್ಷಣ ಮಾಹಿತಿ ನೀಡಿ : ಯಶ್ಪಾಲ್ ಸುವರ್ಣ

ಉಡುಪಿ: ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ವಕ್ಫ್‌ ಬೋರ್ಡ್ ನೋಟೀಸ್ ನೀಡಿ ಗೊಂದಲ ಸೃಷ್ಟಿಯಾಗಿದ್ದು, ಹಲವರ ಪಹಣಿಯಲ್ಲಿ ತಿದ್ದುಪಡಿ ಮಾಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು, ಉಡುಪಿ ಕ್ಷೇತ್ರದ ವ್ಯಾಪ್ತಿಯಲ್ಲಿ ಅಂತಹ ಸಮಸ್ಯೆ ಉಂಟಾದರೆ ತಕ್ಷಣ ಶಾಸಕರ ಕಚೇರಿಗೆ ಮಾಹಿತಿ ನೀಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ದಿಶಾಂಕ್ ಆಪ್ ನಲ್ಲಿ ಉಡುಪಿಯ ಶಿವಳ್ಳಿ ಗ್ರಾಮದ ಸರ್ವೇ ನಂಬರ್ ಪರಿಶೀಲನೆ ನಡೆಸಿದಾಗ ಸುಲ್ತಾನ ಪುರ ಎಂಬ ಅಪರಿಚಿತ ಊರಿನ ಹೆಸರು ನಮೂದಾಗಿದೆ ಈ ಬಗ್ಗೆ ಜಿಲ್ಲಾಡಳಿತ ತಕ್ಷಣ ಸ್ಪಷ್ಟನೆ ನೀಡಿ ಗೊಂದಲ ನಿವಾರಿಸಬೇಕು.

ವಕ್ಫ್ ಬೋರ್ಡ್ ಅವೈಜ್ಞಾನಿಕ ಕಾನೂನುಬಾಹಿರವಾಗಿ ನೋಟೀಸ್ ನೀಡಿ ಸಮಸ್ಯೆ ಸೃಷಿಸಿದೆ, ಸರ್ಕಾರ ತಕ್ಷಣ ಎಲ್ಲಾ ನೋಟೀಸ್ ಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ವಿವಿಧ ದೇವಸ್ಥಾನಗಳ ಜಾತ್ರೆ ಉತ್ಸವ ಆರಂಭಗೊಳ್ಳಲಿದ್ದು, ಸಾರ್ವಜನಿಕರ ಭದ್ರತೆಯ ದೃಷ್ಟಿಯಿಂದ ಜಾತ್ರೆಯಲ್ಲಿ ವ್ಯಾಪಾರ ಮಾಡುವ ವ್ಯಕ್ತಿಗಳು ಸಂಬಂಧಿತ ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆಯಲ್ಲಿ ಹಾಗೂ ದೇವಸ್ಥಾನದ ಆಡಳಿತ ಸಮಿತಿಯ ಅನುಮತಿಯನ್ನು ಕಡ್ಡಾಯವಾಗಿ ಪಡೆಯುವಂತೆ ಸ್ಥಳೀಯಾಡಳಿತ ಸಂಸ್ಥೆಗಳು ನಿಯಮ ರೂಪಿಸುವ ಅಗತ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments