ಉತ್ತರಪ್ರದೇಶ ಫಲಿತಾಂಶ ಕರ್ನಾಟಕ ಚುನಾವಣೆಗೆ ದಿಕ್ಸೂಚಿ : ಮಟ್ಟಾರ್ ರತ್ನಾಕರ ಹೆಗ್ಡೆ

Spread the love

ಉತ್ತರಪ್ರದೇಶ ಫಲಿತಾಂಶ ಕರ್ನಾಟಕ ಚುನಾವಣೆಗೆ ದಿಕ್ಸೂಚಿ : ಮಟ್ಟಾರ್ ರತ್ನಾಕರ ಹೆಗ್ಡೆ

ಉಡುಪಿ: ಉತ್ತರಪ್ರದೇಶ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಶನಿವಾರ ಸರ್ವಿಸ್ ಬಸ್ ನಿಲ್ದಾಣದಲ್ಲಿ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗಾಗಿ ಆಯೋಜಿಸಿದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನರೇಂದ್ರ ಮೋದಿ ನಾಯಕತ್ವದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜನರ ಹೃದಯಗಳನ್ನು ಗೆದ್ದಿದ್ದಾರೆ. ಮೋದಿ ಹಾಗೂ ಬಿಜೆಪಿಯ ಬಗ್ಗೆ ವಿರೋಧ ಪಕ್ಷಗಳು ಮಾಡಿದ ಟೀಕೆಗೆ ಜನತೆ ಚುನಾವಣೆಯಲ್ಲಿ ಸೂಕ್ತವಾದ ಉತ್ತರವನ್ನು ನೀಡಿದ್ದಾರೆ. ನೋಟಿನ ಅಪಮೌಲಿಕರಣವನ್ನು ವಿರೋಧಪಕ್ಷಗಳು ಚುನಾವಣಾ ವಿಷಯವನ್ನಾಗಿ ಮಾಡಿಕೊಂಡಿದ್ದರು ಆದರೆ ಉತ್ತರಪ್ರದೇಶ ಹಾಗೂ ಇತರ ರಾಜ್ಯದ ಜನರು ಇದಕ್ಕೆ ಸೂಕ್ತವಾದ ಉತ್ತರವನ್ನು ಬಿಜೆಪಿ ಪರ ಮತನೀಡುವುದರ ಮೂಲಕ ನೀಡಿದ್ದಾರೆ. ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ 180 ಸೀಟುಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರಲಿದ್ದೇವೆ ಎಂದರು.

ಜಿಪಂ ಅಧ್ಯಕ್ಷ ದಿನಕರ ಬಾಬು, ಮಾಜಿ ಶಾಸಕಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಬಿಜೆಪಿ ನಾಯಕರಾದ ಯಶ್ಪಾಲ್ ಸುವರ್ಣ, ಕಟಪಾಡಿ ಶಂಕರ ಪೂಜಾರಿ, ಕುಯಿಲಾಡಿ ಸುರೇಶ್ ನಾಯಕ್, ಗೀತಾ ರವಿಶೇಟ್, ಶ್ಯಾಮಲಾ ಕುಂದರ್, ಉದಯ್ ಕುಮಾರ್ ಶೆಟ್ಟಿ, ಅಕ್ಷಿತ್ ಶೆಟ್ಟಿ ಹೆರ್ಗ, ಗುರ್ಮೆ ಸುರೇಶ್ ಶೆಟ್ಟಿ, ವೀಣಾ ಎಸ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love