ಉಳಾಯಿಬೆಟ್ಟು ಉದ್ಯಮಿ ಮನೆ ದರೋಡೆ ಪ್ರಕರಣ: 10 ಮಂದಿ ಆರೋಪಿಗಳ ಬಂಧನ

Spread the love

ಉಳಾಯಿಬೆಟ್ಟು ಉದ್ಯಮಿ ಮನೆ ದರೋಡೆ ಪ್ರಕರಣ: 10 ಮಂದಿ ಆರೋಪಿಗಳ ಬಂಧನ

ಮಂಗಳೂರು: ನಗರ ಹೊರವಲಯ ಉಳಾಯಿಬೆಟ್ಟು ಸಮೀಪದ ಪೆರ್ಮಂಕಿಯ ಉದ್ಯಮಿ, ಕಾಂಗ್ರೆಸ್ ಮುಖಂಡ ಪದ್ಮನಾಭ ಕೋಟ್ಯಾನ್ರ ಮನೆಯಲ್ಲಿ ಜೂ.21ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಬಂಧಿತರನ್ನು ವಸಂತ ಪೂಜಾರಿ, ರಮೇಶ್, ರೇಮಂಡ್ ಡಿಸೋಜ, ಬಾಲಕೃಷ್ಣ, ಜಾನ್ ಬಾಸ್ಕೋ, ಶೀಜು, ಸತೀಶ್ ಬಾಬು, ಜಾಕಿರ್ ಹುಸೇನ್, ವಿನೋದ್ ಎಂದು ಗುರುತಿಸಲಾಗಿದೆ.

ಪೊಲೀಸ್ ಆಯುಕ್ತಾಲಯದ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಜೂ.21ರಂದು ರಾತ್ರಿ ಸುಮಾರು 10ಕ್ಕೂ ಅಧಿಕ ಮಂದಿ ಆರೋಪಿಗಳು ಪದ್ಮನಾಭ ಕೋಟ್ಯಾನ್ರ ಮನೆಗೆ ನುಗ್ಗಿ ಪದ್ಮನಾಭ ಕೋಟ್ಯಾನ್ ಮತ್ತವರ ಪತ್ನಿ ಮತ್ತು ಮಗನನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ಸಹಿತ 9 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಇನ್ನೂ ನಾಲ್ಕು ಮಂದಿ ಭಾಗಿಯಾಗಿದ್ದು, ಅವರನ್ನು ಶೀಘ್ರ ಬಂಧಿಸಲಾಗುವುದು. ಪ್ರಕರಣದ ಮುಖ್ಯ ಸೂತ್ರಧಾರಿ ವಸಂತ ಪೂಜಾರಿ ಆಗಿದ್ದು, ಈತ ನೀರುಮಾರ್ಗ ಗ್ರಾಪಂ ಸದಸ್ಯನಾಗಿದ್ದು, ಪದ್ಮನಾಭ ಕೋಟ್ಯಾನ್ ಅವರ ಲಾರಿ ಚಾಲಕನಾಗಿದ್ದ ಎಂದು ಕಮಿಷನರ್ ತಿಳಿಸಿದ್ದಾರೆ.


Spread the love