Spread the love
ಉಳ್ಳಾಲ: ಅಕ್ರಮ ಪಿಸ್ತೂಲು ಹೊಂದಿದ್ದ ಆರೋಪ: ಇಬ್ಬರ ಬಂಧನ
ಉಳ್ಳಾಲ: ಅಕ್ರಮ ಪಿಸ್ತೂಲು ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಾಸರಗೋಡು ಮೂಲದ ಬಶೀರ್ ಮತ್ತು ನಾಸೀರ್ ಎಂದು ಗುರುತಿಸಲಾಗಿದೆ.
ಬಂಧಿತರಿಂದ ಪಿಸ್ತೂಲ್-1, ಸಜೀವ ಮದ್ದುಗುಂಡುಗಳು-2, ಮೊಬೈಲ್ ಫೋನುಗಳು-2, ಹಾಗೂ ಕಪ್ಪು ಬಣ್ಣದ ಹುಂಡೈ ವೆರ್ನಾ ಕಾರನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 7,15,000/- ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ಪೈಕಿ ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳ ಹಾಗೂ ಅಕ್ರಮ ಪಿಸ್ತೂಲ್ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರವರಾದ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
Spread the love