Spread the love
ಉಳ್ಳಾಲ: ಗ್ಯಾಸ್ ಸ್ಫೋಟ; ತಾಯಿ, ಮಕ್ಕಳಿಗೆ ಗಂಭೀರ ಗಾಯ
ಉಳ್ಳಾಲ: ಗ್ಯಾಸ್ ಸ್ಫೋಟ ಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡ ಘಟನೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದೆ.
ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆ ದೊಡ್ಡ ಸದ್ದು ಕೇಳಿಸಿದೆ. ಈ ಘಟನೆಯಲ್ಲಿ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ಕಿಟಕಿ, ಮಲಗಿದ ಕೊಠಡಿ ಸಂಪೂರ್ಣ ಹಾನಿಯಾಗಿದೆ.
ತಾಯಿ ಮಕ್ಕಳು ಮಲಗಿದ ಮಂಚ ಸಂಪೂರ್ಣ ಸುಟ್ಟು ಕರಕಲಾಗಿವೆ.ಈ ಸಂದರ್ಭ ತಾಯಿ ಜೊತೆ ಮಲಗಿದ್ದ ದೊಡ್ಡ ಮಗಳು ಬಾಗಿಲು ತೆರೆದಿದ್ದು, ತಕ್ಷಣ ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Spread the love