ಉಳ್ಳಾಲ: ಮೂವರು ಯುವತಿಯರ ಮೃತ್ಯು ಪ್ರಕರಣ; ರೆಸಾರ್ಟ್ ನ ಮಾಲಕ, ಮೆನೇಜರ್ ಬಂಧನ

Spread the love

ಉಳ್ಳಾಲ: ಮೂವರು ಯುವತಿಯರ ಮೃತ್ಯು ಪ್ರಕರಣ; ರೆಸಾರ್ಟ್ ನ ಮಾಲಕ, ಮೆನೇಜರ್ ಬಂಧನ

ಉಳ್ಳಾಲ: ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳ ದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಎಂದು ಗುರುತಿಸಲಾಗಿದೆ. ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ರವಿವಾರ ತಡರಾತ್ರಿ ಆಗಮಿಸಿದ್ದು, ಮೂವರ ಮೃತದೇಹ ವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಮೂವರ ಮೃತದೇಹವನ್ನು ತಡರಾತ್ರಿ ಮೈಸೂರು ಗೆ ಕೊಂಡೊಯ್ಯಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬಂಧಿತ ಇಬ್ಬರನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು ಮೂಲದ ಮೂವರು ವಿದ್ಯಾರ್ಥಿನಿಯರು ಶನಿವಾರ ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನಲ್ಲಿ ತಂಗಿದ್ದರು. ರವಿವಾರ ರೆಸಾರ್ಟ್ ನ ಈಜು ಕೊಳದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ದುರಂತ ಸಂಭವಿಸಿತ್ತು.


Spread the love