ಎನ್‌ಐಟಿಕೆ ವಿದ್ಯಾರ್ಥಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ

Spread the love

ಎನ್‌ಐಟಿಕೆ ವಿದ್ಯಾರ್ಥಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಮಂಗಳೂರು: ಎನ್‌ಐಟಿಕೆಯ ವಿದ್ಯಾರ್ಥಿಯೊಬ್ಬ ಆರನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಸುರತ್ಕಲ್‌ನಲ್ಲಿ ಶನಿವಾರ ನಡೆದಿದೆ.

ಮಹಾರಾಷ್ಟ್ರ ಮೂಲದ ಆನಂದ ಪಾಠಕ್ (20) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಈತ ಮೂರನೇ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಯಾಗಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಈತ 6ನೆ ಮಹಡಿಗೆ ತೆರಳಿದ್ದು, ಅಲ್ಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.

ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love