ಎಲ್ಲಾ ವರ್ಗದ ಜನತೆಯ ಹಿತ ಕಾಯುವ ಬಜೆಟ್ – ನಳಿನ್ ಕುಮಾರ್ ಕಟೀಲ್

Spread the love

ಎಲ್ಲಾ ವರ್ಗದ ಜನತೆಯ ಹಿತ ಕಾಯುವ ಬಜೆಟ್ – ನಳಿನ್ ಕುಮಾರ್ ಕಟೀಲ್

ಮಂಗಳೂರು: ಚುನಾವಣೆಯ ಹೊಸ್ತಿಲಿನಲ್ಲಿ ನಿರ್ಮಲಾ ಸೀತಾರಾಮ್ ಅವರು ಸದೃಢ ದೇಶ ನಿರ್ಮಾಣದ ಅಭಿವೃದ್ಧಿಯ ಬಜೆಟ್ ಮಂಡಿಸಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ

ಬಡವರ, ರೈತರ ಹಾಗೂ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಇದಾಗಿದೆ. ಮಹಿಳಾ ಸಬಲೀಕರಣಕ್ಕೆ ವಿಶೇಷ ಆದ್ಯತೆ ಕಲ್ಪಿಸಲಾಗಿದೆ. 9 ರಿಂದ 14 ವರ್ಷ ವಯಸ್ಸಿನ ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ ಲಸಿಕೆಗೆ ಉತ್ತೇಜನ ನೀಡುವ ಮೂಲಕ ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ. ಲಕ್ಷ ದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪರೋಕ್ಷವಾಗಿ ಮಂಗಳೂರು ಸಹಿತ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೂ ಸಹಕಾರಿಯಾಗಲಿದೆ. ಪ್ರವಾಸೋದ್ಯಮಕ್ಕೆ ಒತ್ತು ನೀಡಿರುವುದರಿಂದ ಅನೇಕ ಉದ್ಯೋಗ ಹಾಗೂ ವ್ಯವಹಾರಗಳು ಸೃಷ್ಟಿಯಾಗಲಿವೆ.

ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಮೀನುಗಾರರ ಬಹುಕಾಲದ ಬೇಡಿಕೆ ಈಡೇರಿಸಿದ್ದ ಕೇಂದ್ರ ಸರ್ಕಾರ ಈಗ ಮತ್ಸೃ ಸಂಪದ ಯೋಜನೆ ಮುಂದುವರಿಸಿದ್ದು ಕರಾವಳಿಯ ಮೀನುಗಾರರಿಗೆ ವರದಾನವಾಗಲಿದೆ. ದೇಶಾದ್ಯಂತ ಒಂದು ಕೋಟಿ ಮನೆಗಳಿಗೆ ಸೌರ ವಿದ್ಯುತ್, ಮುಂದಿನ 5 ವರ್ಷಗಳಲ್ಲಿ 3 ಕೋಟಿ ಹೊಸ ಮನೆ ನಿರ್ಮಾಣ, ಹೆಚ್ಚಿನ ಮೆಡಿಕಲ್ ಕಾಲೇಜು ನಿರ್ಮಾಣ ಸ್ವಾಗತಾರ್ಹವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love