ಎಸ್ ಐ ಓ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಆಯ್ಕೆ

Spread the love

ಎಸ್ ಐ ಓ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಆಯ್ಕೆ

ಬೆಂಗಳೂರು: ರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್ ಐ ಓ) ಇದರ 2017-2018ರ ಅವಧಿಗೆ ಕರ್ನಾಟಕ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಬೀದರ್ ಜಿಲ್ಲೆಯ ಮುಹಮ್ಮದ್ ರಫೀಕ್ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಮೇಲುಸ್ತ್ತುವಾರಿ ಹಾಗೂ ಜಮಾಅತೆ ಇಸ್ಲಾಮೀ ಹಿಂದ್ ನ ಕರ್ನಾಟಕ ರಾಜ್ಯಾಧ್ಯಕ್ಷರಾದ ಮುಹಮ್ಮದ್ ಅತ್ಹರುಲ್ಲಾ ಶರೀಫ್ ರವರ ಅಧ್ಯಕ್ಷತೆಯಲ್ಲಿ ನಡೆದ ಎಸ್ ಐ ಓ ನ ರಾಜ್ಯ ಸಲಹಾ ಸಮಿತಿಯ ಸದಸ್ಯರ ಸಭೆಯಲ್ಲಿ ನಡೆಸಲಾದ ಚುನಾವಣೆಯಲ್ಲಿ ಮುಹಮ್ಮದ್ ರಫೀಕ್ ರವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

rafeeq-beedar

ಸರ್ ಎಂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಎಂಟೆಕ್ ಪದವೀಧರರಾಗಿರುವ ಮುಹಮ್ಮದ್ ರಫೀಕ್, ಪ್ರಸ್ತುತ ಮಂಗಳೂರಿನ ದೇರಳಕಟ್ಟೆಯ ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2015-16ರ ಅವಧಿಯಲ್ಲಿ ಎಸ್ ಐ ಓ ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈ ಸಂದರ್ಭ ಸಭೆಯಲ್ಲಿ ಎಸ್ ಐ ಓ ನ ಪ್ರಸ್ತುತ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ, ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ಕಾರ್ಯದರ್ಶಿ ಮುಹಮ್ಮದ್ ಬಿಲಾಲ್ ಮತ್ತಿತರರು ಉಪಸ್ಥಿತರಿದ್ದರು.


Spread the love