ಕಥೊಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜಾರ ಹಲ್ಲೆ ಪ್ರಕರಣ – ಇಬ್ಬರ ಬಂಧನ

Spread the love

ಕಥೊಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜಾರ ಹಲ್ಲೆ ಪ್ರಕರಣ – ಇಬ್ಬರ ಬಂಧನ

ಮಂಗಳೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರ್ ಬ್ರಿಡ್ಜ್ ಬಳಿ ಕ್ಯಾಥೋಲಿಕ ಸಭಾಭವನ ವತಿಯಿಂದ ನಡೆಸುತ್ತಿದ್ದ ಪ್ರತಿಭಟನೆ ಸಮಯ ಆಲ್ವಿನ್ ಜೆರೋಮ್ ಡಿಸೋಜಾ ಎಂಬವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊ.ನಂ.79/2024 ಕಲಂ: 352, 115(2), 351(2), 109 ಜೊತೆಗೆ 3(5) ಬಿ.ಎನ್.ಎಸ್ (ಕಲಂ 504,323,307,506 ಜೊತೆಗೆ 34 ಐ.ಪಿ.ಸಿ ) ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ  ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಬಂಧಿತರನ್ನು ಫರಂಗಿಪೇಟೆ ನಿವಾಸಿ ಮೊಹಮ್ಮದ್ ಅತಾವುಲ್ಲ (40) ಮತ್ತು ತೌಸೀರ್ !ಪತ್ತೊಂಜಿ ತೌಚಿ (31) ಎಂದು ಗುರುತಿಸಲಾಗಿದೆ.

ದಸ್ತಗಿರಿ ಮಾಡಲಾದ ಆರೋಪಿತರ ಪೈಕಿ ಮಹಮದ್ ಅತಾವುಲ್ಲಾ ಎಂಬಾತನು ಘಟನಾ ಸಮಯದಲ್ಲಿ ಆಲ್ವಿನ್ ಅವರಿಗೆ ಅವಾಚ್ಯವಾಗಿ ಬೈದು ಹಲ್ಲೆಗೆ ಪ್ರಚೋದನೆ ನೀಡಿದ್ದು ಹಾಗೂ ಅವಾಚ್ಯವಾಗಿ ಬೈದು ಹಲ್ಲೆ ಮಾಡಿದ ಪ್ರಮುಖ ಆರೋಪಿ ತೌಸಿರ್ ಯಾನೆ ಪತ್ತೊಂಜಿ ತೌಸಿರ್ ನ್ನು ದಸ್ತಗಿರಿ ಮಾಡಲಾಗಿರುತ್ತದೆ. ಪ್ರಕರಣದ ತನಿಖೆ ಮುಂದುವರೆದಿರುತ್ತದೆ.


Spread the love
Subscribe
Notify of

0 Comments
Inline Feedbacks
View all comments