ಕರಾವಳಿ ಉತ್ಸವ: ಹೆಲಿಕಾಪ್ಟರ್ ರೈಡ್‍ಗೆ ಚಾಲನೆ

Spread the love

ಕರಾವಳಿ ಉತ್ಸವ: ಹೆಲಿಕಾಪ್ಟರ್ ರೈಡ್‍ಗೆ ಚಾಲನೆ

ಮಂಗಳೂರು:  ಕರಾವಳಿ ಉತ್ಸವ ಪ್ರಯುಕ್ತ ಆರಂಭಿಸಿರುವ ಹೆಲಿಕಾಪ್ಟರ್ ಸಂಚಾರಕ್ಕೆ ಶನಿವಾರ ಪದ್ಮಶ್ರೀ ಪುರಸ್ಕøತರಾದ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯಕ್ ಅವರು ಜಂಟಿಯಾಗಿ ಚಾಲನೆ ನೀಡಿದರು.

ನಗರದ ಮೇರಿಹಿಲ್ ಹೆಲಿಪ್ಯಾಡ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರೇಕಳ ಹಾಜಬ್ಬ ಅಮೈ ಮಹಾಲಿಂಗ ನಾಯಕ್ ಅವರು ಹೆಲಿಕಾಪ್ಟರ್‍ನಲ್ಲಿ ಸಂಚರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮಂಗಳೂರು ನಗರ ಪೆÇಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪೊಲೀಸು ವರಿಷ್ಠಾಧಿಕಾರಿ ಯತೀಶ್, ಅರಣ್ಯ ಸಂರಕ್ಷಣಾಧಿಕಾರಿ ಆಂ್ಯಟೋನಿ ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದು, ಹೆಲಿಕಾಪ್ಟರ್‍ನಲ್ಲಿ ಸಂಚರಿಸಿದರು.

ಬಳಿಕ ಮಾತನಾಡಿದ ಹರೇಕಳ ಹಾಜಬ್ಬ ಮತ್ತು ಮಹಾಲಿಂಗ ನಾಯಕ್ ಅವರು ಕರಾವಳಿ ಉತ್ಸವದ ಸೊಬಗಿಗೆ ಸಾರ್ವಜನಿಕರಿಗೆ ಹೆಲಿಕಾಪ್ಟರ್ ಸಂಚಾರ ಆರಂಭಿಸಿರುವುದು ಶ್ಲಾಘನೀಯವಾಗಿದೆ, ಪ್ರವಾಸಿಗರು/ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದನ್ನು ಪೆÇ್ರೀತ್ಸಾಹಿಸಬೇಕೆಂದು ಹೇಳಿದರು.

ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಎಂ.ಪಿ ಮಾತನಾಡಿ ಕರಾವಳಿ ಉತ್ಸವವನ್ನು ಆಕರ್ಷಣೀಯವನ್ನಾಗಿಸಲು ಹೆಲಿಕಾಪ್ಟರ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹೆಲಿಕಾಪ್ಟರ್‍ನಲ್ಲಿ ಸಂಚರಿಸಿ ಮಂಗಳೂರು ನಗರವನ್ನು ವೈಮಾನಿಕವಾಗಿ ದರ್ಶನ ಮಾಡಿ ಹಾಗೂ ಕಡಲ ಕಿನಾರೆ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.

ಖಾಸಗಿ ಸಂಸ್ಥೆಯ ಹೆಲಿಕಾಪ್ಟರ್ ಇದನ್ನು ನಡೆಸಿಕೊಡಲಿದ್ದು, ಜಿಲ್ಲಾಡಳಿತ ಸಹಕಾರ ನೀಡಲಿದೆ. ಪ್ರತಿ ಟ್ರಿಪ್ ನಲ್ಲಿ 6 ಜನರಿಗೆ ಅವಕಾಶ ಇದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಹೆಲಿಟೂರಿಸಂ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇದು ಹೆಚ್ಚು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.


Spread the love