ಕಲ್ಸಂಕದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಯವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Spread the love

ಕಲ್ಸಂಕದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಯವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ:  ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸುಗಮ ಸಂಚಾರಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ರಾಷ್ಟೀಯ ಹೆದ್ದಾರಿ ಇಲಾಖೆಯ ಮೂಲಕ ಫ್ಲೈ ಓವರ್ ನಿರ್ಮಾಣ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಯವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಮುಖಾಂತರ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿದರು.

ಉಡುಪಿ ನಗರದ ಹೃದಯ ಭಾಗದಲ್ಲಿ ಸಾಗುವ ರಾಷ್ಟೀಯ ಹೆದ್ದಾರಿ 169 ಎ ನಲ್ಲಿ ಪ್ರಮುಖವಾಗಿರುವ ಕಲ್ಸಾಂಕ ಜಂಕ್ಷನ್ ಉಡುಪಿ ಶ್ರೀ ಕೃಷ್ಣ ಮಠ, ಮಣಿಪಾಲ, ಅಂಬಾಗಿಲು ಸಂಪರ್ಕಿಸುವ ಕೇಂದ್ರ ಭಾಗವಾಗಿರುವ ಕಾರಣ ವಾಹನ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ರಜಾ ದಿನಗಳಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೂಲಕ ಫ್ಲೈ ಓವರ್ ನಿರ್ಮಾಣಕ್ಕೆ ಮುಂದಿನ ಸಭೆಯಲ್ಲಿ ನಗರಸಭೆ ಮೂಲಕವೂ ಪ್ರಸ್ತಾವನೆ ಸಲ್ಲಿಸಲಾಗುವುದು ಸಂಸದರು ಈ ಬಗ್ಗೆ ಕೇಂದ್ರ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಸಂಸದರಿಗೆ ತಿಳಿಸಿದರು.

ಮನವಿಗೆ ಸ್ಪಂದಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಲ್ಸಂಕ ಜಂಕ್ಷನ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರೊಂದಿಗೆ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಯವರನ್ನು ಭೇಟಿ ಮಾಡಿ ಶೀಘ್ರ ಫ್ಲೈ ಓವರ್ ನಿರ್ಮಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದರು.


Spread the love
Subscribe
Notify of

0 Comments
Inline Feedbacks
View all comments