ಕಾಂಗ್ರೆಸ್-ಜೆಡಿಎಸ್ ಸರ್ಕಾರ ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ- ಶೋಭಾ ಕರಂದ್ಲಾಜೆ

Spread the love

ಕಾಂಗ್ರೆಸ್-ಜೆಡಿಎಸ್ ಸರ್ಕಾರ ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ- ಶೋಭಾ ಕರಂದ್ಲಾಜೆ

ಉಡುಪಿ: ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮುಚ್ಚಿಹಾಕುವ ಸಲುವಾಗಿ ಕಾಂಗ್ರೆಸ್- ಜೆಡಿಎಸ್ ನೇತೃತ್ವದ ರಾಜ್ಯ ಸರಕಾರ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭ ಕರಂದ್ಲಾಜೆ ಕಿಡಿಕಾರಿದ್ದಾರೆ.

ಅವರು ಶುಕ್ರವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಜನಾರ್ಧನ ರೆಡ್ಡಿಯವರನ್ನು ಬಂಧಿಸುವ ಮೂಲಕ ವಿಪಕ್ಷ ನಾಯಕರನ್ನು ಟಾರ್ಗೆಟ್ ಮಾಡುವ ಕೆಲಸ ಮಾಡುತ್ತಿದ್ದು,ರೆಡ್ಡಿ ನ್ಯಾಯಕ್ಕಾಗಿ ಕೋರ್ಟಿನಲ್ಲಿ ಫೈಟ್ ಮಾಡುತ್ತಿದ್ದಾರೆ. ದ್ವೇಷ ರಾಜಕಾರಣ ಮಾಡುವ ರಾಜ್ಯ ಸರಕಾರ ಇದಕ್ಕೆ ಉತ್ತರಿಸಬೇಕು. ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ ಸರಕಾರ ಇಂದಿಗೂ ಕೂಡ ಸಾಲಮನ್ನಾವನ್ನೂ ಜಾರಿ ಮಾಡಿಲ್ಲ. ರೈತರು ನಿರಂತರವಾಗಿ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕರ್ನಾಟಕದ ಜನರ ಪಾಲಿಗೆ ರಾಜ್ಯ ಸರ್ಕಾರ ಸತ್ತು ಹೋಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲದೆ ರಾಜ್ಯದ ಜನ ಬಡವಾಗಿದ್ದಾರೆ ಎಂದರು.

ಗಣಿ ಧನಿ ಜನಾರ್ದನ ರೆಡ್ಡಿಯವರನ್ನು ನಾವು ಸಮರ್ಥಿಸಿಕೊಳ್ಳುವುದಿಲ್ಲ ಮತ್ತು ಅದರ ಅಗತ್ಯವೂ ನಮಗಿಲ್ಲ. ಆದರೆ ರಾಜ್ಯ ಸರ್ಕಾರ ತರಾತುರಿಯಲ್ಲಿ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣವಾಗಿದೆ ಎಂದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕು ಎಂದು ದೇಶದ ಜನರು ಹಲವು ವರ್ಷಗಳಿಂದ ಅಪೇಕ್ಷೆ ಪಟ್ಟಿದ್ದಾರೆ. ಮೋದಿ ನೇತೃತ್ವದಲ್ಲಿ ಈ ಬಾರಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂಬ ವಿಶ್ವಾಸ ಇದೆ. ಆರ್ ಎಸ್ ಎಸ್ ದೇಶದಾದ್ಯಂತ ಬೃಹತ್ ಜನಜಾಗೃತಿ ಸಮಾವೇಶಗಳನ್ನು ಆಯೋಜಿಸಿದೆ. ರಾಮ ಮಂದಿರ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿಧಾನಗತಿ ಮಾಡಬಾರದು. ಸುಪ್ರೀಂ ಕೋರ್ಟ್ ಭಕ್ತರ ಭಾವನೆಗೆ ಸ್ಪಂದಿಸಬೇಕು ಅಲ್ಲದೆ ಕೇಂದ್ರ ಸರ್ಕಾರ ಕೂಡ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ ಅವರು ಈ ವಿಚಾರ ಸತ್ಯಕ್ಕೆ ದೂರವಾದುಉ. ಈ ಬಗ್ಗೆ ಮಂಗಳೂರಿನಲ್ಲಿ ನಡೆದ ಆರ್ ಎಸ್ ಎಸ್ ಬೈಠಕ್ ನಲ್ಲಿ ಯಾವುದೇ ರೀತಿಯ ಚರ್ಚೆಯಾಗಿಲ್ಲ ಆದ್ದರಿಂದ ವಿಚಾರ ಸಂಪೂರ್ಣ ಉಹಾಪೋಃವಾಗಿದೆ. ಯಾರೋ ಉದ್ದೇಶಪೂರ್ವಕವಾಗಿ ಹುಟ್ಟು ಹಾಕಿದ ಸುಳ್ಳು ಸುದ್ದಿ ಇದಾಗಿದೆ ಎಂದರು.

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಮಾಧ್ಯಮಗಳಲ್ಲಿ ಬರುವ ಚರ್ಚೆ ಸಂಪೂರ್ಣ ಸುಳ್ಳು ಆಗಿದ್ದು ಬಿಜೆಪಿಯನ್ನು ಅಭದ್ರಗೊಳಿಸಲು ಷ್ಯಡ್ಯಂತ್ರ ನಡೆಸುತ್ತಿದ್ದಾರೆ ಎಂದರು.

ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಪ್ರತಿಕ್ರಿಯಿಸಿದ ಶೋಭಾ ಇಂದಿನ ದಿನಗಳಲ್ಲಿ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಿರುವವರು ಹೆಚ್ಚುತಿದ್ದಾರೆ ಆದರೆ ನಾವು ಇಷ್ಟು ವರ್ಷ ಇದನ್ನು ಸಹಿಸಿಕೊಂಡು ಬಂಧಿದ್ದೇವೆ. ದೇವಸ್ಥಾನ ವಿಚಾರವನ್ನು ಭಕ್ತರಿಗೆ, ಪಂದಳ ರಾಜ, ಅರ್ಚಕರಿಗೆ ಬಿಡಬೇಕು. ಸುಪ್ರೀಂ ಕೋರ್ಟ್ ಅಯ್ಯಪ್ಪ ಭಕ್ತರ ಭಾವನೆಗೆ ಬೆಲೆ ಕೊಡಲಬೇಕು . ಅಯ್ಯಪ್ಪ ದೇವಳ ವಿರೋಧಿ ಸಾಮಾಜಿಕ ಕಾರ್ಯಕರ್ತೆ ತ್ರಪ್ತಿ ದೇಶಾಯಿ ಅವರೂ ಕೂಡ ದೇವಳ ಪ್ರವೇಶ ಹಿನ್ನಲೆಯಲ್ಲಿ ಕೊಚ್ಚಿಗೆ ಬಂದು ಇಳಿದಿದ್ದಾರೆ. ತೃಪ್ತಿ ದೇಸಾಯಿ ಒರ್ವ ಭಕ್ತೆಯಾಗಿ ಬಂದಿಲ್ಲ ಬದಲಾಗಿ ದೇಶದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಕೇರಳಕ್ಕೆ ಬಂಧಿದ್ದಾರೆ ಎಂದರು


Spread the love