ಕಾನೂನು ಬಾಹಿರ ಚಟುವಟಿಕೆಗಳಿಗೆ ದುಷ್ಚಟಗಳೇ ಕಾರಣ- ಜಿಲ್ಲಾ ನ್ಯಾಯಾಧೀಶ ವೆಂಕಟೇಶ್ ನಾಯ್ಕ್
ಉಡುಪಿ: ಸಮಾಜದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳಿಗೆ , ವ್ಯಕ್ತಿ ದುಷ್ಟಟಗಳಿಗೆ ವ್ಯಸನಿಯಾಗಿರುವುದೇ ಪ್ರಮುಖ ಕಾರಣ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ್ ಟಿ ಹೇಳಿದ್ದಾರೆ.
ಅವರು ಗುರುವಾರ, ಜಿಲ್ಲಾಡಳಿತ ಉಡುಪಿ , ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ , ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮತ್ತು ನಿಷೇಧ ಕೋಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ , ಉದ್ಯಾವರದ ಟ್ರಿನಿಟಿ ಕೈಗಾರಿಕಾ ಸಂಸ್ಥೆಯಲ್ಲಿ ನಡೆದ , ಜಿಲ್ಲಾ ಮಟ್ಟದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಧೂಮಪಾನ ಮತ್ತು ಮದ್ಯಪಾನದಂತಹ ದುಷ್ಚಟಗಳನ್ನು ಹೊಂದಿರುವ ವ್ಯಕ್ತಿಗಳಿಂದ ಸಮಾಜದಲ್ಲಿ ಹೆಚ್ಚಿನ ಅಪರಾಧ ಪ್ರಕರಣಗಳು ನಡೆಯುತ್ತಿದ್ದು, ಇಂತಹ ದುಷ್ಚಟಗಳಿಂದ ವ್ಯಕ್ತಿಯ ಮನಸ್ಸು ಮತ್ತು ಇಂದ್ರಿಯ ನಿಗ್ರಹ ಸಾದ್ಯವಾಗದ ಕಾರಣ ಅಜ್ಞಾನದಿಂದ ವ್ಯಕ್ತಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುತ್ತಾನೆ, ಜಗತ್ತಿನಲ್ಲಿ ಸಂಭವಿಸುವ ಮಾನವನ ಮರಣ ಪ್ರಮಾಣಕ್ಕೆ ಧೂಮಪಾನವು 2 ನೆ ದೊಡ್ಡ ಕಾರಣವಾಗಿದೆ, ಧೂಮಪಾನದಿಂದ ವ್ಯಕ್ತಿಯಲ್ಲಿ ಉಸಿರಾಟದ ತೊಂದರೆ, ಕ್ಯಾನ್ಸರ್, ಹೃದಯಾಘಾತ ಸೇರಿದಂತೆ ಹಲವು ಕಾಯಿಲೆಗಳು ಕಾಣಿಸಿಕೊಳ್ಳಲಿದೆ, ಧೂಮಪಾನದ ದುಷ್ಪರಿಣಾಗಳ ಕುರಿತು ಸಮಾಜದಲ್ಲಿ ಅರಿವು ಮೂಡಿಸುವ ಕಾಯಕ್ರಮಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯಬೇಕು, ಪ್ರತಿಯೊಬ್ಬ ವ್ಯಕ್ತಿಯೂ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೆಕು, ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೆಕು, ದುಷ್ಚಟಗಳಿಗೆ ಆಕರ್ಷಣೇಗಳಿಎ ಬಲಿಯಾಗಬಾರದು ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದರು.
ಪ್ರಸ್ತಾವನೆಯಲ್ಲಿ ಮಾತನಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ್, ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ, ಸಾರ್ವಜನಿಕ ಸ್ಥಳದಲ್ಲಿ ದೂಮಪಾನ ನಿಷೇಧ ಹಾಗೂ ಶಾಲಾ ಆವರಣದಲ್ಲಿ ತಂಬಕು ವಸ್ತುಗಳ ಮಾರಾಟ ನಿಷೇಧಿಸಲಾಗಿದ್ದು, ಈ ಕುರಿತು ಪರಿಶೀಲಿಸಲು ಜಿಲ್ಲೆಯಾದ್ಯಂತ 5 ತಂಡಗಳನ್ನು ರಚಿಸಿದ್ದು, ಈ ತಂಡಗಳು ದಿಡೀರ್ ದಾಳಿ ನಡೆಸುವ ಮೂಲಕ , ತಂಬಾಕು ವಸ್ತುಗಳನ್ನು ವಳಪಡಿಸಿಕೊಂಡು ದಂಡ ವಸೂಲಿ ಮಾಡಲಾಗುತ್ತಿದೆ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ತಂಬಾಕು ವ್ಯಸನಿಗಳಿಗೆ ನಿಕೋಟಿನ್ ಥೆರಪಿ ಚಿಕಿತ್ಸೆ ನೀಡಲು ಡಿ ಅಡಿಕ್ಷನ್ ಸೆಂಟರ್ ತರೆಯಲಾಗಿದ್ದು, ತಂಬಾಕು ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಲತಾ ಮಾತನಾಡಿ, ಅಪ್ರಾಪ್ತ ಮಕ್ಕಳಿಗೆ ದೂಮಪಾನ ಮಾಡುವ ಕುರಿತಂತೆ ಉತ್ತೇಜನ ನೀಡುವುದು, ಅವರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ, ವಿದ್ಯಾರ್ಥಿಗಳು ದುಷ್ಚಗಳಿಗೆ ಬಲಿಯಾಗದೇ ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ , ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಕೆಎಂಸಿ ಮಣಿಪಾಲ ಸಮುದಾಯ ಆರೋಗ್ಯ ವಿಭಾಗದ ಡಾ. ಮುರಳೀಧರ ಕುಲಕರ್ಣಿ ಉಪಸ್ಥಿತರಿದ್ದರು.
ಟ್ರಿನಿಟಿ ಕೈಗಾರಿಕಾ ಸಂಸ್ಥೆಯ ಪ್ರಾಂಶುಪಾಲ ಜಾನ್ ಎಂ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಸ್ವಾಗತಿಸಿದರು.