ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ  ನಿಧನ

Spread the love

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ  ನಿಧನ

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments