ಕಿಶೋರ್ ಕುಮಾರ್ ಪುತ್ತೂರು ಗೆಲುವಿಗೆ ಕಾಯ, ವಾಚಾ, ಮನಸಾ ಶ್ರಮಿಸಿ – ಗುರ್ಮೆ ಸುರೇಶ್ ಶೆಟ್ಟಿ
ಉಡುಪಿ: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯ ನೆಲೆಯಲ್ಲಿ ಪಂಚಾಯತ್ ಸದಸ್ಯರ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿಯು ಕಾರ್ಯಕರ್ತರ ತ್ಯಾಗ, ಸಮರ್ಪಣೆಯನ್ನು ಗಮನದಲ್ಲಿರಿಸಿಕೊಂಡು ಅವರನ್ನು ಗುರುತಿಸುತ್ತಿದೆ. ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಹಾಗೂ ರಾಮನಾಥ್ ಕೋವಿಂದ್ ಅವರಿಗೆ ಅವರ ಬದ್ಧತೆಯ ನೆಲೆಯಲ್ಲಿ ಪಕ್ಷ ಗೌರವ ನೀಡಿದೆ. ಮುಂಬರುವ ಉಪಚುನಾವಣೆಯ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಗೆಲ್ಲಿಸಲು ಕಾಯ, ವಾಚಾ, ಮನಸಾ ಶ್ರಮಿಸುವಂತೆ ಕರೆ ನೀಡಿದರು.
ಮಾಜಿ ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಪಕ್ಷ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಈ ಬಾರಿ ವಿಧಾನ ಪರಿಷತ್ ಟಿಕೇಟ್ ನೀಡಿದೆ. ಅವರನ್ನು ಗೆಲ್ಲಿಸುವ ಜವಬ್ದಾರಿ ಎಲ್ಲಾ ಕಾರ್ಯಕರ್ತರ ಮೇಲಿದೆ ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದು ಕಿಶೋರ್ ಕುಮಾರ್ ಅವರು ಪಂಚಾಯತ್ ರಾಜ್ ವ್ಯವಸ್ಥೆಗೆ ಬಲ ತುಂಬಲಿದ್ದಾರೆ. ಇಲ್ಲಿನ ಸಮಸ್ಯೆಗಳಿಗೆ ವಿಧಾನ ಪರಿಷತ್ತಿನಲ್ಲಿ ನಿಮ್ಮೆಲ್ಲರ ಧ್ವನಿಯಾಗಿರಲಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ ಹೇಳಿದರು.
ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ, ದೇಶಕ್ಕಾಗಿ ಬಲಿದಾನ ಮಾಡಿರುವ ಏಕೈಕ ಪಕ್ಷ ಬಿಜೆಪಿ ಮಾತ್ರ. ಚುನಾವಣೆ ನಡೆಯುವುದು ಜಾತಿಯ ಮೇಲಲ್ಲ. ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಸೂಕ್ತ ರೀತಿ ಸ್ಪಂದಿಸುವ ಮಹತ್ತರವಾದ ಜವಬ್ದಾರಿ ಅದು. ಪಕ್ಷದ ಹಿರಿಯರು ಹಾಕಿಕೊಟ್ಟ ಹಾದಿಯಲ್ಲಿ ಜನಸೇವೆ ಮಾಡುತ್ತೇನೆ ಎಂದರು.
ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಕೊಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೆ ಸುವರ್ಣ, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್ ಪೆರ್ಣoಕಿಲ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಅಭ್ಯರ್ಥಿ ಪ್ರಮುಖ್ ಅರುಣ್ ಶೆಟ್ಟಿ, ಅಭ್ಯರ್ಥಿ ಪ್ರವಾಸಿ ಪ್ರಮುಖ್ ರಾಜೇಶ್ ಕಾವೇರಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್,ಶರಣ್ ಕುಮಾರ್ ಮಟ್ಟು, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.