ಕುತೂಹಲ ಕೆರಳಿಸಿದ ಸಚಿವ ಪ್ರಮೋದ್ ಮಧ್ವರಾಜ್ –ಅನಂತ ಕುಮಾರ್ ಭೇಟಿ!
ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮುಂದಿನ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವಾಗಲೇ ಸೋಮವಾರ ಉಡುಪಿಗೆ ಆಗಮಿಸಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಅವರನ್ನು ಭೇಟಿ ಮಾಡಿರುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಹ್ಮಾವರದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಉಡುಪಿಗೆ ಬಂದಿದ್ದ ಅನಂತ್ ಕುಮಾರ್ ಅವರು ಪ್ರವಾಸಿ ಮಂದಿರದಲ್ಲಿ ಕೆಲ ಕಾಲ ಉಳಿದಿದ್ದರು. ಆ ಸಂದರ್ಭದಲ್ಲಿಯೆ ಪ್ರಮೋದ್ ಅವರೂ ಪ್ರವಾಸಿ ಮಂದಿರಕ್ಕೆ ಹೋದಾಗ ಭೇಟಿ ಮಾಡಿದರು. ಕೆಲ ಹೊತ್ತು ಲೋಕಾಭಿರಾಮವಾಗಿ ಮಾತನಾಡಿದರು ಎಂದು ತಿಳಿದು ಬಂದಿದೆ. ಸ್ಥಳದಲ್ಲಿದ್ದ ಮಾಧ್ಯಮ ಮಂದಿ ಕೇಳಿದಾಗ ಇದು ಆಕಸ್ಮಿಕ ಭೇಟಿ, ದಿನದ ಕಾರ್ಯಕ್ರಮಳಿಂದಾಗಿ ಫ್ರೆಶ್ ಅಪ್ ಆಗಲು ಪ್ರವಾಸಿ ಮಂದಿರಕ್ಕೆ ಹೋದಾಗ ಅವರು ಇರುವುದು ಗೊತ್ತಾಯಿತು. ಆದ್ದರಿಂದ ಮಾತನಾಡಿಸಿದೆ ಅಷ್ಟೆ. ಇದರಲ್ಲಿ ಬೇರೇನೂ ಇಲ್ಲ ಇದಕ್ಕೆ ಯಾವುದೇ ರೀತಿಯ ಅರ್ಥ ಕಲ್ಪಿಸಬೇಕಾಗಿಲ್ಲ ಎಂದಿದ್ದಾರೆ.
ಬಿಜೆಪಿ ಮುಖಂಡ ಆರ್. ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ಹಾಗೂ ಇತರರು ಇದ್ದರು.
ಈ ನಡುವೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಐವನ್ ಡಿಸೋಜಾ ಕರಾವಳಿಯ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುತ್ತಾರೆ ಎನ್ನುವುದು ಅಪ್ಪಟ ಸುಳ್ಳು. ಬಿಜೆಪಿ ಮುಳುಗುತ್ತಿರುವ ದೋಣಿ. ಅದಕ್ಕೆ ಯಾರೂ ಹೋಗಲ್ಲ. ಬದಲಿಗೆ ಬಿಜೆಪಿಯವರೇ ಕಾಂಗ್ರೆಸ್ಗೆ ಬರುತ್ತಾರೆ ಕಾಂಗ್ರೆಸ್ನಿಂದ ಯಾರು ಕೂಡ ಹೊರ ಹೋಗುವ ಪ್ರಶ್ನೆಯೇ ಇಲ್ಲ’ಎಂದರು.
it shows that politicians are apportunists