ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇವರಿಂದ ಮಂಗಳೂರಿನ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆ

Spread the love

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇವರಿಂದ ಮಂಗಳೂರಿನ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ನೂತನ ಬಿಷಪ್ ಆಗಿ ನೇಮಕಗೊಂಡಿರುವ ವಂ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಶನಿವಾರ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಪದಾಧಿಕಾರಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಸಭಾ ಇದರ ಪರವಾಗಿ ನೂತನ ಧರ್ಮಾಧ್ಯಕ್ಷರಿಗೆ ಶಾಲು ಹೊದಿಸಿ ಸನ್ಮಾನಿಸಿದ ಪದಾಧಿಕಾರಿಗಳು ಅವರ ಆಶೀರ್ವಾದವನ್ನು ಪಡೆದುಕೊಂಡರು.

ನಿಯೋಗದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್, ಆಧ್ಯಾತ್ಮಿಕ ನಿರ್ದೇಶಕ ವಂ. ಫರ್ಡಿನಾಂಡ್ ಗೊನ್ಸಾಲ್ವಿಸ್, ಮಾಜಿ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್, ಎಲ್ ರೊಯ್ ಕಿರಣ್ ಕ್ರಾಸ್ತಾ, ನಿಯೋಜಿತ ಅಧ್ಯಕ್ಷೆ ಮೇರಿ ಡಿಸೋಜ, ಉಪಾಧ್ಯಕ್ಷರಾದ ರೋಬರ್ಟ್ ಮಿನೇಜಸ್, ಕಾರ್ಯದರ್ಶಿ ಮ್ಯಾಕ್ಷಿಮ್ ಡಿ’ಸೋಜಾ, ಜೆರಾಲ್ಡ್ ರೊಡ್ರಿಗಸ್ ಹಾಗೂ ಇತರರು ಉಪಸ್ಥಿತರಿದ್ದರು.


Spread the love