ಕೊಣಾಜೆ ಬೈಕ್ ಕಳ್ಳತನದ ಆರೋಪಿಯ ಬಂಧನ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ದಿನಗಳ ಹಿಂದೆ ಕಳವುಗೈದ ಬೈಕ್ ಮತ್ತು ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಂಧಿತನನ್ನು ಬೋಳಿಯಾರು, ಬಂಟ್ವಾಳ ನಿವಾಸಿ ಝಕೀರ್ ಹುಸೈನ್ @ ಜಾಕಿ, ಪ್ರಾಯ(21) ಎಂದು ಗುರುತಿಸಲಾಗಿದೆ.
ಮಾರ್ಚ್ 3ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರು ಗ್ರಾಮದ ಮದಕ ಎಂಬಲ್ಲಿನ ಇಬ್ರಾಹೀಂ ಎಂಬವರು ಅವರ ಸ್ನೇಹಿತ ಸಿದ್ದಿಕ್ ಎಂಬವರ ಮನೆಯ ಕಂಪೌಂಡ್ ನಲ್ಲಿ ಪಾರ್ಕ್ ಮಾಡಿದ್ದ ಕೆಎ-19-ಇಬಿ-2122 ನೇ ಬಜಾಜ್ ಡಿಸ್ಕವರ್ ಬೈಕ್ ನ್ನು ಯಾರೋ ಕಳ್ಳರು ರಾತ್ರಿ ಸಮಯದಲ್ಲಿ ಕಳವು ಮಾಡಿದ್ದರು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾನುವಾರದಂದು ಸಿಸಿಬಿ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ಸಮಯ ಮಂಗಳೂರು ನಗರದ ಫಳ್ನೀರ್ ರಸ್ತೆಯ ಮಲಬಾರ್ ಗೋಲ್ಡ್ ಎದುರುಗಡೆ ಕಳವು ಗೈದ ಬೈಕ್ ಕೆಎ-19-ಇಬಿ-2122 ನೇ ಬೈಕ್ ನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಆತನಿಂದ ಕಳವುಗೈದ ಕೆಎ-19-ಇಬಿ-2122 ನೇ ಬೈಕ್ ನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ವಶಪಡಿಸಿಕೊಂಡ ಬೈಕ್ ನ ಆಂದಾಜು ಮೌಲ್ಯ ರೂ. 25,000/- ಆಗಿರುತ್ತದೆ. ಆರೋಪಿ ಝಕೀರ್ ಹುಸೈನ್ @ ಜಾಕಿ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಗಾಂಜಾ ಪ್ರಕರಣ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.
ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.