ಕೋಟೆಕಾರ್ ಉಳ್ಳಾಲ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

Spread the love

ಕೋಟೆಕಾರ್ ಉಳ್ಳಾಲ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

ಎಲ್ಲಾ ಟೋಲ್ ಗಳಲ್ಲಿ ತಪಾಸಣೆ: ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಸೂಚನೆ

ಮಂಗಳೂರು: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌

ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.


Spread the love
Subscribe
Notify of

0 Comments
Inline Feedbacks
View all comments