ಕೋವಿಡ್ 19 ಆದೇಶಗಳನ್ನು ಉಲ್ಲಂಘನೆ ಮಾಡುವವರ ವಿರುದ್ದ ಕ್ರಿಮಿನಲ್ ದಾಖಲೆ – ಜಿಲ್ಲಾಧಿಕಾರಿ ಜಿ ಜಗದೀಶ್
ಉಡುಪಿ : ಕೋವಿಡ್ 19 ಆದೇಶಗಳನ್ನು ಉಲ್ಲಂಘನೆ ಮಾಡುವವರ ವಿರುದ್ದ ಕ್ರಿಮಿನಲ್ ದಾಖಲೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ
ಹೋಂ ಕ್ವಾರಂಟೈನ್ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಹೊರಡಿಸಿರುವ ಆದೇಶ ಹಾಗೂ ಕೋವಿಡ್ ರೋಗಗಳನ್ನು ತಡೆಗಟ್ಟುವ ಸಲುವಾಗಿ ಹೊರಡಿಸಲಾಗಿರುವ ಇತರೆ ನಿರ್ದೇಶನಗಳನ್ನು ಪಾಲಿಸದೇ ಇದ್ದವರ ಮೇಲೆ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಅಧಿಕಾರಿವನ್ನು ಡಿಸಾಸ್ಟರ್ ಮೆನೇಜ್ಮೆಂಟ್ ಆಕ್ಟ್ 2005, ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಮತ್ತು ಐಪಿಸಿ ಸೆಕ್ಷನ್ 188 ಪ್ರಕಾರ, ಹೋಂ ಕ್ವಾರಂಟೈನ್ ಬಗ್ಗೆ ನಿಗಾ ಇರಿಸುವ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಗೆ ಮತ್ತು ಪೌರಾಯುಕ್ತರು ಉಡುಪಿ ನಗರಸಭೆ, ಮುಖ್ಯಾಧಿಕಾರಿಗಳು ಕುಂದಾಪುರ/ಕಾರ್ಕಳ/ಕಾಪು ಪುರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಹಾಗೂ ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಪಂಚಾಯತ್ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿ ಇವರಿಗೆ ಪ್ರತ್ಯಾಯೋಜಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.