ಕೋವಿಡ್ -19: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ

Spread the love

ಕೋವಿಡ್ -19: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ

ಉಡುಪಿ: ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ನಗರಸಭೆಯ ವತಿಯಿಂದ ಸೋಂಕು ನಿವಾರಕ ಸಿಂಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಚರಂಡಿ ರಸ್ತೆಗಳ ಬದಿಗಳಲ್ಲಿ ಹೈಪ್ರೊ ಕ್ಲೋರೈಡ್ ದ್ರಾವಣವನ್ನು ಸಿಂಪಡಿಸಲಾಗುತ್ತದೆ. ನಗರ ಸಭಾ ವ್ಯಾಪ್ತಿಯ ಎಲ್ಲಾ 35 ವಾರ್ಡ್ ಗಳಲ್ಲಿ ಈ ದ್ರಾವಣವನ್ನು ಸಿಂಪಡಿಸಲಾಗುತ್ತದೆ.

ವೈರಸ್ ಹರಡದಂತೆ ತಡೆಗಟ್ಟಲು ಈ ಕ್ರಮ ಕೈಗೊಂಡಿದ್ದು ನಗರಸಭಾ ವ್ಯಾಪ್ತಿಯ ಎಲ್ಲಾ 35 ವಾರ್ಡ್ ಗಳಲ್ಲಿ ಸೋಂಕು ನಿವಾರಕವನ್ನು ಸಿಂಪಡಿಸಲಾಗುತ್ತದೆ ಎಂದು ನಗರ ಸಭಾ ಆಯುಕ್ತರಾದ ಆನಂದ್ ಕಲ್ಲೊಳಿಕರ್ ಹೇಳಿದರು.

ಈಗಾಗಲೇ ನಗರಸಭೆಯ ವತಿಯಿಂದ ತರಕಾರಿ ಹಣ್ಣುಗಳು, ದಿನಸಿ ವ್ಯಾಪಾರ ನಡೆಯುವ ಸ್ಥಳಗಳಲ್ಲಿ ನಗರಸಭೆಯ ವತಿಯಿಂದ ಧ್ವನಿವರ್ಧಕದ ಮೂಲಕ ಸೋಂಕು ಬರದಂತೆ ಮಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಅಲ್ಲದೆ ಇದನ್ನು ಪಾಲಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಕೂಡ ನೀಡಲಾಗುತ್ತಿದೆ ಎಂದು ಅವರು ಹೇಳಿದರು.


Spread the love