ಕೋವಿಡ್-19 ; ಒಂದು ಕೋಮಿನ ಜನರನ್ನು ಗುರಿಯಾಗಿಸಿ ನಿಂದಿಸಿದರೆ ಕ್ರಮ – ದಕ ಜಿಲ್ಲಾ ಪೊಲೀಸ್
ಮಂಗಳೂರು: ಕೋವಿಡ್-19 ವಿಚಾರದಲ್ಲಿ ಒಂದು ನಿರ್ಧಿಷ್ಟ ಕೋಮನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕವಾಗಿ ಹಾಗೂ ಕೋಮು ಪ್ರಚೋದನಾಕಾರಿಯಾಗಿ ಸುದ್ದಿಗಳನ್ನು ಪ್ರಸಾರಪಡಿಸುತ್ತದ್ದರೆ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ ಜಿಲ್ಲಾ ಪೊಲೀಸ್ ಎಚ್ಚರಿಕೆ ನೀಡಿದೆ.
ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಕೊರೋನಾ ವೈರಸ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಬ್ಬುತ್ತಿದ್ದು ಈ ನಡುವೆ ಒಂದು ನಿರ್ಧಿಷ್ಟ ಕೋಮನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕವಾಗಿ ಹಾಗೂ ಕೋಮು ಪ್ರಚೋದನಾಕಾರಿಯಾಗಿ ಸುದ್ದಿಗಳನ್ನು ಪ್ರಸಾರಪಡಿಸುತ್ತಿರುವುದು ಕಂಡುಬಂದಿರುತ್ತದೆ. ಈ ಹಿನ್ನಲೆಯಲ್ಲಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 04 ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ.
ಮುಂದಿನ ದಿನಗಳಲ್ಲೂ ಸಹ ಈ ರೀತಿ ಯಾವುದೇ ಕೋಮಿನ ಧಾರ್ಮಿಕತೆಗೆ ಧಕ್ಕೆಯಾಗುವಂತ ಫೇಸ್ ಬುಕ್/ವ್ಯಾಟ್ಸ್ ಆಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಸುದ್ದಿ/ ಚಿತ್ರಗಳನ್ನುಪ್ರಸಾರಪಡಿಸಿದಲ್ಲಿ ಅಂತಹ ಕಿಡಿಗೇಡಿಗಳ ಮೊಬೈಲ್ ವಶಪಡಿಸಲಾಗುವುದು ಹಾಗೂ ಅಂತಹವರ ವಿರುದ್ಧ ವ್ಯಕ್ತಿಗಳು ಇಂತಹ ಕುಕೃತ್ಯದಲ್ಲಿ ಭಾಗಿಯಾಗಿದ್ದರೆ ಅಂತಹವರನ್ನು ಆಸ್ಪತ್ರೆಯಲ್ಲಿ ಕ್ಯಾರಂಟೈನ್ನಲ್ಲಿಟ್ಟು ಕಠಿಣ ಕಾನೂನು ಕ್ರಮಕ್ಕಗೊಳ್ಳಲಾಗುವುದು. ಈಗಾಗಲೇ ಹೋಮ್ ಕ್ವಾರಂಟೈನ್ ನಲ್ಲಿರುವ ಕ್ವಾರಂಟೈನ್ ಅವಧಿ ಮುಗಿದ ಕೂಡಲೇ ಅವರುಗಳ ಮೇಲೆ ಕಠಿಣ ಕಾನೂನು ಕ್ರಮಕ್ಕಗೊಳ್ಳಲಾಗುವುದು.