ಕೋವಿಡ್ – 19 ಲಾಕ್ ಡೌನ್ ; ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕಳ್ಳಬಟ್ಟಿ ಸಾರಾಯಿ ವಶ

Spread the love

ಕೋವಿಡ್ – 19 ಲಾಕ್ ಡೌನ್ ; ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕಳ್ಳಬಟ್ಟಿ ಸಾರಾಯಿ ವಶ

ಉಡುಪಿ: ಕೋವಿಡ್-19ರ ಸಾಂಕ್ರಾಮಿಕ ರೋಗ ತಡೆಗಟ್ಟಲು ಕ್ರಮ ತೆಗೆದುಕೊಳ್ಳವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚಲು ಆದೇಶ ನೀಡಿದ್ದು ಈವೇಳೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕಳ್ಳಬಟ್ಟಿ ಸಾರಾಯಿಯನ್ನು ಅಬಕಾರಿ ಇಲಾಖೆ ವಶಪಡಿಸಿಕೊಂಡು ಒರ್ವ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾದ ವ್ಯಕ್ತಿಯನ್ನು ಶಿವಳ್ಳಿ ಗ್ರಾಮದ ರಾಬರ್ಟ್ ಡಿಸೋಜಾ ಎಂದು ಗುರುತಿಸಲಾಗಿದೆ.

ಎಪ್ರಿಲ್ 1 ರಂದು ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಶೈಲಜಾ ಎ ಕೋಟೆ ಇವರ ಮಾರ್ಗದರ್ಶನದಂತೆ ಉಡುಪಿ ಅಬಕಾರಿ ಉಪ ಆಯುಕ್ತರಾದ ನಾಗೇಶ್ ಕುಮಾರ್ ಅವರ ನಿರ್ದೇಶನದಂತೆ ಉಡುಪಿ ವಲಯ 2 ರ ಅಬಕಾರಿ ನಿರೀಕ್ಷಕರು, ಉಡುಪಿ ಜಿಲ್ಲಾ ತಂಡದ ಅಬಕಾರಿ ಉಪ ನಿರೀಕ್ಷಕರು ಮತ್ತು ಸಿಬಂದಿಗಳು ಗಸ್ತು ತಿರುಗುತ್ತಿದ್ದ ವೇಳೆ ಸುಜುಕಿ ವ್ಯಾಗನರ್ ಕಾರಿನಲ್ಲಿ ಸಾಗಿಸುತ್ತಿದ್ದ 2.5 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ ಅದರ ತಯಾರಿಗೆ ಉಪಯೋಗಿಸಲು ಸಾಗಿಸುತ್ತಿದ್ದ 10 ಕೆ ಜಿ ಬೆಲ್ಲ, 5 ಕೆಜಿ ಸಕ್ಕರೆ ಹಾಗೂ ಕ್ಯಾನುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಆರೋಪಿಯು ವಾಹನವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಆರೋಪಿಯ ವಿರುದ್ದ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.


Spread the love