ಕೋವಿಡ್-19 ಹೆಚ್ಚಳ ಹಿನ್ನಲೆ; ಜು13ರಿಂದ31 ರ ವರೆಗೆ ಕುಂದಾಪುರದಲ್ಲಿ ಮಧ್ಯಾಹ್ನ 2 ಗಂಟೆಯ ಬಳಿಕ ಸ್ವಯಂ ಪ್ರೇರಿತ ಬಂದ್

Spread the love

ಕೋವಿಡ್-19 ಹೆಚ್ಚಳ ಹಿನ್ನಲೆ; ಜು13-31 ರ ವರೆಗೆ ಕುಂದಾಪುರದಲ್ಲಿ ಮಧ್ಯಾಹ್ನ 2 ಗಂಟೆಯ ಬಳಿಕ ಸ್ವಯಂ ಪ್ರೇರಿತ ಬಂದ್

ಕುಂದಾಪುರ: ತಾಲೂಕಿನಲ್ಲಿ ಕೋವಿಡ್-19 ವೈರಸ್ ಸಾಮುದಾಯಿಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ವರ್ತಕರು ಮತ್ತು ಸಾರ್ವಜನಿಕ ಹಿತದೃಷ್ಠಿಯಿಂದ ಜು.13 ರಿಂದ ಜು.31 ತನಕ ಕುಂದಾಪುರ ಪುರಸಭಾ ವ್ಯಾಪ್ತಿಯ ಎಲ್ಲಾ ಅಂಗಡಿಗಳು ಮಧ್ಯಾಹ್ನ 2 ಗಂಟೆಯ ಬಳಿಕ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು ಎಂದು ಕುಂದಾಪುರದ ಸಮಾನ ಮನಸ್ಕ ವರ್ತಕರು ತಿಳಿಸಿದ್ದಾರೆ.

ಈ ಕುರಿತು ನಗರದ ಖಾಸಗಿ ಹೋಟೇಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವರ್ತಕ ರಾಧಕೃಷ್ಣ ಅವರು, ಮೆಡಿಕಲ್, ಹಾಲು, ಹೋಟೆಲ್, ಬಾರ್ ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆಯಲಿದ್ದು, ಆ ಬಳಿಕ ಸ್ವಯಂ ಪ್ರೇರಿತ ಬಂದ್ ನಡೆಸಲಾಗುತ್ತದೆ ಎಂದರು.

ಕುಂದಾಪುರ ಪುರಸಭಾ ವ್ಯಾಪ್ತಿಯ ಸುಮಾರು 150ಕ್ಕೂ ಹೆಚ್ಚು ಮಂದಿ ಸಮಾನ ಮನಸ್ಕ ವ್ಯಾಪಾರಸ್ಥರು ಈ ಬಗ್ಗೆ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದೇವೆ. ಕಳೆದ ನಾಲ್ಕು ದಿನಗಳಿಂದ ಎಲ್ಲ ಅಂಗಡಿಗಳಿಗೂ ಭೇಟಿ ನೀಡಿ ಮನವಿ ಮಾಡಿದ್ದೇವೆ. ಸ್ವಯಂ ಪ್ರೇರಿತ ಬಂದ್ಗೆ ಎಲ್ಲರ ಬೆಂಬಲ ಸಿಕ್ಕಿದೆ ಎಂದವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವರ್ತಕ ಶ್ರೀಧರ್ ಪಿ.ಎಸ್, ಈ ಬಗ್ಗೆ ಎಲ್ಲ ವರ್ತಕರಿಂದ ಒಮ್ಮತದ ನಿರ್ಧಾರ ಕೈಗೊಂಡಿದ್ದು, ಗ್ರಾಹಕರು ಕೂಡ ಸಹಕರಿಸಬೇಕು. ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ, ಜಿಲ್ಲಾಡಳಿತದೊಂದಿಗೆ ನಮ್ಮ ಹೊಣೆಗಾರಿಕೆಯೂ ಇದೆ. ಸ್ವಯಂ ಪ್ರೇರಿತ ಬಂದ ಕುರಿತಂತೆ ಸಹಾಯಕ ಆಯುಕ್ತರು ಹಾಗೂ ಪೆÇಲೀಸ್ ಇಲಾಖೆಗೂ ಮನವಿ ಸಲ್ಲಿಸಲಾಗುವುದು ಎಂದರು.

ಈ ಸಂದರ್ಭ ಜುವೆಲ್ಲರ್ಸ್ ಅಸೋಸಿಯೇಶನ್ ಅಧ್ಯಕ್ಷ ಸತೀಶ್ ಶೇಟ್, ವರ್ತಕರಾದ ವಿಜಯ ಕುಮಾರ್ ಶೆಟ್ಟಿ, ಹುಸೇನ್ ಹೈಕಾಡಿ, ಅಬು ಮಹಮ್ಮದ್, ತಬ್ರೈಜ್, ಸಂತೋಷ್, ಸತೀಶ್ ಹೆಗ್ಡೆ, ಜಸ್ವಂತ್ ಸಿಂಗ್, ಸುರೇಂದ್ರ ಶೇಟ್ ಮತ್ತಿತರರು ಉಪಸ್ಥಿತರಿದ್ದರು.

ಏನಿದೆ ? ಏನಿಲ್ಲ?
ಎಲ್ಲ ದಿನಸಿ, ತರಕಾರಿ, ಹಣ್ಣು, ಎಲೆಕ್ಟ್ರಿಕಲ್ ಶೋ ರೂಂ, ಮೊಬೈಲ್, ಬಟ್ಟೆ, ಬೇಕರಿ, ಜೂಸ್ ಪಾರ್ಲರ್, ಸೆಲೂನ್, ಬೂಟಿ ಪಾರ್ಲರ್ಗಳು, ಚಿನ್ನದ ಮಳಿಗೆಗಳು ಸೇರಿದಂತೆ ಎಲ್ಲ ಅಂಗಡಿಗಳು ಜುಲೈ ಅಂತ್ಯದವರೆಗೆ ಮಧ್ಯಾಹ್ನ 2 ಗಂಟೆಯ ಬಳಿಕ ಬಂದ್ ಇರಲಿದೆ. ತುರ್ತು ಅಗತ್ಯತೆಯಾದ ಮೆಡಿಕಲ್, ಅ„ಕೃತ ಹಾಲು ಮಾರಾಟ ಅಂಗಡಿ, ಎಲ್ಲ ಹೋಟೆಲ್ಗಳು ಎಂದಿನಂತೆ ತೆರೆಯಲಿದೆ.


Spread the love