Spread the love
ಗಂಗೊಳ್ಳಿ: ಗ್ಯಾಸ್ ಸಾಗಾಟ ವಾಹನ – ಬೈಕ್ ಢಿಕ್ಕಿ: ಸವಾರ ಸ್ಥಳದಲ್ಲಿಯೇ ಮೃತ್ಯು
ಗಂಗೊಳ್ಳಿ: ಗ್ಯಾಸ್ ಸಾಗಾಟ ಮಾಡುತ್ತಿದ್ದ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ನಡೆದಿದೆ.
ಮೃತರನ್ನು ಮಂಗಳೂರು ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕೆಬಿ ಯುವರಾಜ್ ಬಲ್ಲಾಳ ಎಂಬವರ ಪುತ್ರ ರಂಜಿತ್ ಬಲ್ಲಾಳ್(59) ಎಂದು ಗುರುತಿಸಲಾಗಿದೆ.
ರಂಜಿತ್ ಬಲ್ಲಾಳ್ ಗೋವಾ ಕಡೆಯಿಂದ ಮಂಗಳೂರು ಕಡೆಗೆ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಬೈಕ್, ಗ್ಯಾಸ್ ವಾಹನಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದ ರಂಜಿತ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the love