ಗಾಂಜಾ ಹೊಂದಿದ 8 ವಿದ್ಯಾರ್ಥಿಗಳ ಸೆರೆ
ಮಂಗಳೂರು: ನಗರದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ನೀಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 8 ಮಂದಿ ಯುವಕರನ್ನು ಗಾಂಜಾ ಸಮೇತ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಜನವರಿ 12 ರಂದು ಮಂಗಳೂರು ನಗರದ ಮೋರ್ಗನ್ ಗೇಟ್ ಬಳಿಯ ಮೈದಾನದಲ್ಲಿ ನಿಷೇಧಿತ ಅಕ್ರಮ ಮಾದಕ ವಸ್ತುವಾದ ಗಾಂಜಾವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದಾರೆ ಹಾಗೂ ಸೇವನೆ ಮಾಡುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಗಾಂಜಾವನ್ನು ಹೊಂದಿಕೊಂಡಿದ್ದ ಕೊಲ್ಲಂ ನಿವಾಸಿ ಅಕ್ಷಯ್ ಪ್ರಸಾದ್ ಕೆ (22), ಕಣ್ಣೂರು ಬೋರುಗುಡ್ಡೆ ನಿವಾಸಿ ಜಾಫರ್(22), ತಳಿಪರಂಬ್ ನಿವಾಸಿ ನಿಮಿಲ್ (21), ಅಮಿತ್ ಶ್ರಿವತ್ಸನ್ (21), ಅಶ್ವಿನ್ (21), ಮೊಹಮ್ಮದ್ ಅಮೀರ್ (22), ಅಕಾಶ್ ಎಸ್ ನಾಯರ್ (23), ಅಕ್ಷಯ್ (22) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ರೂ. 12,000/- ರೂ ಮೌಲ್ಯದ 500 ಗ್ರಾಂ ಗಾಂಜಾ, 8 ಮೊಬೈಲ್ ಫೋನ್ ಗಳು, ನಗದು ರೂ. 4050/- ಹಾಗೂ 2 ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,69,050/- ಆಗಿರುತ್ತದೆ. ಈ ವಿದ್ಯಾರ್ಥಿಗಳು ಕೇರಳದಿಂದ ಗಾಂಜಾವನ್ನು ಖರೀದಿ ಮಾಡಿ ಮಂಗಳೂರು ನಗರದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳ ಪೈಕಿ 7 ಮಂದಿ ಮಂಗಳೂರಿನ ಎರಡು ಇಂಜಿನಿಯರಿಂಗ್ ಕಾಲೇಜಿನ ಹಾಗೂ ಒಂದು ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಾಗಿರುತ್ತಾರೆ.
ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಠಾಣೆಯ ಇನ್ಸ್ ಪೆಕ್ಟರ್ ರಾಮಕೃಷ್ಣ ಮತ್ತು ಸಿಸಿಬಿ ಪಿ.ಎಸ್.ಐ ಕಬ್ಬಾಳ್ ರಾಜ್ ಹೆಚ್ ಡಿ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.