ಗಾಂಧಿ ವಿರುದ್ಧ ಅನಂತ ಕುಮಾರ್ ಹೆಗ್ಡೆ ಆಕ್ಷೇಪಾರ್ಹ ಹೇಳಿಕೆ: ಶೋಕಾಸ್ ನೋಟಿಸ್ ನೀಡಿದ ಬಿಜೆಪಿ

Spread the love

ಗಾಂಧಿ ವಿರುದ್ಧ ಅನಂತ ಕುಮಾರ್ ಹೆಗ್ಡೆ ಆಕ್ಷೇಪಾರ್ಹ ಹೇಳಿಕೆ: ಶೋಕಾಸ್ ನೋಟಿಸ್ ನೀಡಿದ ಬಿಜೆಪಿ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಸಂಸದ ಅನಂತ ಕುಮಾರ್ ಹೆಗ್ಡೆ ಅವರಿಗೆ ಬಿಜೆಪಿ ಹೈಕಮಾಂಡ್ ಶೋ ಕಾಸ್ ನೋಟಿಸ್ ನೀಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆಯ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಶೋಕಾಸ್ ನೋಟಿಸ್ ನೀಡಿದ್ದು, ಹೆಗ್ಡೆ ಅವರಿಂದ ವಿವರಣೆ ಬಯಸಿದ್ದಾರೆ ಎಂದು ಕಟೀಲ್ ಸುದ್ದಿಸಂಸ್ಥೆಯೊಂದಕ್ಕೆ ಹೇಳಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟ, ಅಹಿಂಸಾ ಚಳವಳಿ ಹಾಗೂ ಮಹಾತ್ಮ ಗಾಂಧಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇತಿಹಾಸದ ಪ್ರಕಾರ ಉಪವಾಸಕ್ಕೆ ಹೆದರಿ ಬ್ರಿಟಿಷರು ದೇಶ ಬಿಟ್ಟು ಹೋದರು, ಇದನ್ನು ಕೇಳಿದರೆ ತಣ್ಣಗಿರುವ ರಕ್ತ ಹೆಪ್ಪುಗಟ್ಟಿ ಹೋಗುತ್ತದೆ. ಸ್ವಾತಂತ್ರ್ಯ ಹೋರಾಟದಲ್ಲಿ ಲಾಠಿ ನೋಡದ, ಏಟು ತಿನ್ನದವರನ್ನು ಹಾಗೂ ಬ್ರಿಟಿಷರ ಜೊತೆಗೆ ಒಳಒಪ್ಪಂದ ಮಾಡಿಕೊಂಡವರನ್ನು ಇತಿಹಾಸದ ಪುಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರೆಂದು ಬಿಂಬಿಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದರು.

ಮಂಗಳವಾರ ನಡೆಯಲಿರುವ ಸಂಸದೀಯ ಮಂಡಳಿ ಸಭೆಗೆ ಬರಬಾರದು ಎಂದು ಸೂಚಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.


Spread the love