ಗೂಂಡಾ ಕಾಯ್ದೆಯಡಿ ವ್ಯಕ್ತಿಯ ಬಂಧನ

Spread the love

ಗೂಂಡಾ ಕಾಯ್ದೆಯಡಿ ವ್ಯಕ್ತಿಯ ಬಂಧನ

ಉಡುಪಿ: ಹಿರಿಯಡ್ಕ ಪೋಲಿಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದ ಕುದಿ ಗ್ರಾಮದ ನಿವಾಸಿ ದಿವಾಕರ ಆಚಾರಿ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.

ಈತನ ವಿರುದ್ದ ಗೂಂಡಾ ಕಾಯ್ದೆಯನ್ನು ಜಾರಿಗೊಳಿಸಲು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣ ಜಿಲ್ಲಾ ದಂಡಾಧಿಕಾರಿ ಮತ್ತು ಜಿಲ್ಲಾಧಿಕಾರಿಯಾಗಿರುವ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಇವರಿಗೆ ವರದಿ ಸಲ್ಲಿಸಿದ ಮೇರೆಗೆ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಈತನ ವಿರುದ್ದ ಈ ವರೆಗೆ ಎರಡು ಕೊಲೆ ಪ್ರಕರಣ, ಒಂದು ಕೊಲೆ ಯತ್ನ ಹಾಗೂ 5 ಮನೆ ಕಳವು ಪ್ರಕರಣಗಳು ದಾಖಲಾಗಿವೆ.


Spread the love