Spread the love
ಜ.23: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇದರ ಅಧಿಕೃತ ಜಿಲ್ಲಾ ಕಚೇರಿಯ ಉದ್ಘಾಟನಾ ಸಮಾರಂಭವು ಜ.23ರಂದು ಸಂಜೆ 4 ಗಂಟೆಗೆ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಚೇರಿಯನ್ನು ರಾಜ್ಯ ಗೃಹ ಸಚಿವ ಹಾಗೂ ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಉದ್ಘಾಟಿಸಲಿರುವರು ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಯುವಜನ ಸಬಲಿಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಉಪಸ್ಥಿತರಿರುವರು ಎಂದು ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಹರಿಪ್ರಸಾದ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love